ಕೆಆರ್ಎಸ್ ಡ್ಯಾಂ ಬಿರುಕು ವಿಚಾರವಾಗಿ ಸಂಸದೆ ಸುಮಲತಾ ಅಂಬರೀಶ್ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡುವಿನ ವಾಕ್ಸಮರ ಕಾವೇರುತ್ತಲೇ ಇದೆ.
ಈ ನಡುವೆಯೇ ಸುಮಲತಾ ಅವರು ಮಾತಿನ ಮಧ್ಯೆ ಅಂಬರೀಶ್ ಮುಂದೆ ಯಾರೆಲ್ಲಾ ಕೈ ಕಟ್ಟಿ ನಿಲ್ತಿದ್ರು ಎಂದು ತಮಗೆ ಗೊತ್ತಿದೆ ಎಂದಿದ್ದರು. ಅಂಬರೀಶ್ ಎದುರು ಕೈಕಟ್ಟಿ ನಿಲ್ಲುತ್ತಿದ್ದವರೆಲ್ಲಾ ಈಗ ಮಾತನಾಡುತ್ತಿದ್ದಾರೆ ಎಂದಿದ್ದರು.
ನೀವು ಸಾವಿರಾರು ಜನರನ್ನು ತಯಾರು ಮಾಡಿಸಿರಬಹುದು. ಆದ್ರೆ ನಿಮ್ಮ ಈ ರೀತಿಯ ನಡವಳಿಕೆ ಮಾತುಗಳಿಂದಲೇ ಎಷ್ಟೋ ಒಳ್ಳೆಯ ಜನ ಬೇರೆ ಪಕ್ಷ ಸೇರಿಕೊಂಡಿದ್ದಾರೆ. ನಿಮ್ಮ ಮಾತುಗಳಿಂದಲೇ ಅವರೆಲ್ಲ ನಿಮ್ಮ ಪಕ್ಷ ತೊರೆದಿರೋದು. ನೀವು ತಯಾರು ಮಾಡಿರುವ ಸಾವಿರಾರರು ಜನ, ಅದಕ್ಕಿಂತ ದೊಡ್ಡವರು ಅಂಬರೀಶ್ ಅವರ ಮುಂದೆ ಕೈ ಕಟ್ಟಿ ನಮ್ಮ ಮನೆಯಲ್ಲಿ ನಿಂತಿರೋದನ್ನು ಹಲವು ವರ್ಷ ನೋಡಿದ್ದೇನೆ ಎಂದು ಸುಮಲತಾ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದರು.
ಈ ಮಾತಿಗೆ ಪುಷ್ಟಿ ನೀಡಲು ಎಂಬಂತೆ ಸುಮಲತಾ ಹಾಗೂ ಅಂಬರೀಶ್ ಅವರ ಬೆಂಬಲಿಗರು ಪೋಟೋ ಒಂದುನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.