ಅದ್ದೂರಿಯಾಗಿ ನಡೆದ ನಿಖಿಲ್ ಕುಮಾರಸ್ವಾಮಿ ಎಂಗೇಜ್‍ಮೆಂಟ್

ಜೆಡಿಎಸ್ ಯುವ ಘಟಕದ ಅಧ್ಯಕ್ಷ, ಸ್ಯಾಂಡಲ್‍ವುಡ್ ಯುವರಾಜ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ. ಬೆಂಗಳೂರಿನ ತಾಜ್‍ವೆಸ್ಟ್ ಎಂಟ್ ಹೋಟೆಲ್‍ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಉಂಗುರ ಬದಲಿಸಿಕೊಂಡಿದ್ದಾರೆ.


ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ ದಂಪತಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದಂಪತಿ, ಮಾಜಿ ಮಂತ್ರಿ ರೇವಣ್ಣ ಕುಟುಂಬ ಸಮೇತ ಪಾಲ್ಗೊಂಡಿದ್ದಾರೆ. ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಸೇರಿ ಹಲವು ಗಣ್ಯರು ಈ ಶುಭ ಸಂದರ್ಭಕ್ಕೆ ಸಾಕ್ಷಿಯಾದರು.

LEAVE A REPLY

Please enter your comment!
Please enter your name here