ಅನ್ನ ಬ್ರಹ್ಮನ ಕ್ಷೇತ್ರದಲ್ಲಿ ಅನ್ನದಾಸೋಹ

ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರ ನೇತೃತ್ವದಲ್ಲಿ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರಿ ಕ್ವಾರಂಟೈನ್ ನಲ್ಲಿ ಇರುವವರಿಗೆ ಗಣೇಶೋತ್ಸವ ಸಮಿತಿ ಕಡಿಯಾಳಿ (ರಿ), ಉಡುಪಿ ಮತ್ತು ಆಸರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇಂದಿನಿಂದ ಒದಗಿಸಲಾಗುತ್ತಿರುವ ಊಟದ ತಯಾರಿಯನ್ನು ತಂಡದೊಂದಿಗೆ ಸೇರಿಕೊಂಡು ಸಮರ್ಪಕವಾಗಿ ತಲುಪಿಸುವಲ್ಲಿ ಶಾಸಕರು ಕೈಜೋಡಿಸಿದರು.

ವಿದೇಶದಿಂದ ಹಾಗೂ ಹೊರ ರಾಜ್ಯಗಳಿಂದ ಬಂದು ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಉಡುಪಿ ಮತ್ತು ಬ್ರಹ್ಮಾವರದಲ್ಲಿ ಸರ್ಕಾರಿ ಕ್ವಾರಂಟೈನ್ ನಲ್ಲಿ ಇರುವ 400 ಕ್ಕೂ ಅಧಿಕ ಮಂದಿಗೆ ಶುಚಿ ರುಚಿಯಾದ ಊಟದ ತಯಾರಿ ಹಾಗೂ ಅದನ್ನು ಪ್ರತ್ಯೇಕವಾಗಿ ವ್ಯವಸ್ಥಿತವಾದ ರೀತಿಯಲ್ಲಿ ಪ್ಯಾಕೆಟ್ ಶಾಸಕರ ನೇತೃತ್ವದಲ್ಲಿ ಇಂದು (ದಿ.16-05-2020) ರಾತ್ರಿಯ ಊಟವನ್ನು ವ್ಯವಸ್ಥಿತವಾಗಿ ತಲುಪಿಸಲಾಯಿತು.

ಈ ಸಂದರ್ಭದಲ್ಲಿ ರಾಘವೇಂದ್ರ ಕಿಣಿ, ನಗರ ಸಭಾ ಸದಸ್ಯ ಗಿರೀಶ್ ಅಂಚನ್, ಮಂಜುನಾಥ ಹೆಬ್ಬಾರ್, ಹಾಗೂ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here