ಆಸ್ತಿ ತೆರಿಗೆಯಲ್ಲಿ ಶೇಕಡಾ 5ರಷ್ಟು ರಿಯಾಯಿತಿ – ಮತ್ತೆ 2 ತಿಂಗಳು ವಿಸ್ತರಣೆ

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿ ಮೇಲಿನ ಶೇಕಡಾ 5ರಷ್ಟು ರಿಯಾಯಿತಿ ಪಡೆಯುವ ಕಾಲಾವಧಿಯನ್ನು ರಾಜ್ಯ ಸರ್ಕಾರ ಜುಲೈ 31ರವರೆಗೂ ವಿಸ್ತರಿಸಿ ಆದೇಶ ಹೊರಡಿಸಿದೆ.

ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಈ ವಿನಾಯ್ತಿ ಅನ್ವಯ ಆಗಲಿದೆ. ಆಸ್ತಿ ತೆರಿಗೆ ವಿನಾಯ್ತಿ ವಿಸ್ತರಣೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಅನ್ವಯಿಸಲ್ಲ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಮಾರ್ಚ್‌ 31ರೊಳಗೆ ಆಸ್ತಿ ತೆರಿಗೆ ಪಾವತಿಸಿದರೆ ಶೇಕಡಾ 5ರಷ್ಟು ರಿಯಾಯಿತಿ ನೀಡುವುದಾಗಿ ಈ ಹಿಂದೆ ಸರ್ಕಾರ ಘೋಷಿಸಿತ್ತು. ಈ ವಿನಾಯ್ತಿಯನ್ನು ಮೇ 31ರವರೆಗೂ ವಿಸ್ತರಿಸಲಾಗಿತ್ತು. ಈಗ ಮತ್ತೆ ಜುಲೈ 31ರವರೆಗೆ ವಿನಾಯ್ತಿ ವಿಸ್ತರಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

ಅಂದರೆ ಜುಲೈ 31ರವರೆಗೂ ಯಾರು ಆಸ್ತಿ ತೆರಿಗೆ ಪಾವತಿಸುತ್ತಾರೋ ಅವರೆಲ್ಲರಿಗೂ ಶೇಕಡಾ 5ರಷ್ಟು ತೆರಿಗೆ ವಿನಾಯ್ತಿ ಸಿಗಲಿದೆ.

LEAVE A REPLY

Please enter your comment!
Please enter your name here