ಬೆಂಗಳೂರು: ಕೆಎಸ್ಆರ್ಟಿಸಿ ಬಸ್ಗಳಲ್ಲಿ ಲಗೇಜು ಸಾಗಾಣೆಯ ನಿಯಮಗಳು ಮಾರ್ಪಾಡು ತೀರ್ಮಾನವನ್ನು ಕೈಗೊಂಡಿದ್ದು, ಅದರಂತೆ ನಾಯಿ ಮತ್ತು ನಾಯಿ ಮರಿಗೆ ಅರ್ಧ ಟಿಕೆಟ್ ದರವನ್ನು ವಿಧಿಸುವಂತೆ ಸೂಚಿಸಲಾಗಿದೆ.
ನಾಯಿಯನ್ನು ಕೊಂಡೊಯ್ಯಲು ಒಬ್ಬ ವಯಸ್ಕ ಪ್ರಯಾಣಿಕರನ್ನು ಪರಿಗಣಿಸಿ ವಿಧಿಸಲಾಗುತ್ತಿದ್ದ ದರದಲ್ಲಿ ಇದೀಗ ಬದಲಾವಣೆ ಮಾಡಲಾಗಿದೆ.
ಸಾಮಾನ್ಯ ವೇಗದೂತ, ನಗರ ಹೊರವಲಯ ಬಸ್ಗಳಲ್ಲಿ ನಾಯಿ ಸಾಗಾಣಿಕೆಗೆ ಅವಕಾಶ ಮಾಡಿಕೊಡಲಾಗಿದೆ. ಹಾಗೆಯೇ ಬಸ್ನಲ್ಲಿ ಅತಿಯಾದ ಲಗೇಜ್ ಸಾಗಾಣಿಕೆಗೆ ಕಡಿವಾಣ ಹಾಕಿದ್ದು, ಪ್ರತಿ ಪ್ರಯಾಣಿಕರ 30ಕೆಜಿ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಒಂದು ವೇಳೆ 30 ಕೆಜಿಗಿಂತ ಹೆಚ್ಚು ಸಾಗಾಣಿಕೆಗೆ ಹೆಚ್ಚುವರಿ ದರ ವಿಧಿಸಲು ಕೆಎಸ್ಆರ್ಟಿಸಿ ಹೊಸ ಆದೇಶವನ್ನು ನೀಡಿದೆ.
ಈ ಹಿಂದೆ ಪ್ರಯಾಣಿಕರು ನಾಯಿಯ ಮೇಲೆ ವಿಧಿಸುವ ಟಿಕೆಟ್ ದರವನ್ನು ಕಡಿಮೆ ಮಾಡುವಂತೆ ಒತ್ತಾಯವನ್ನು ಮಾಡಿದ್ದು, ಇದೀಗ ಸಾರಿಗೆ ಇಲಾಖೆ ಒತ್ತಾಯಕ್ಕೆ ಮಣಿದು ಈ ನಿರ್ಧಾರವನ್ನು ತೆಗೆದುಕೊಂಡಿದೆ.