ಉಡುಪಿಯಲ್ಲಿ ನಾಳೆಯಿಂದ ಸರಕಾರಿ- ಖಾಸಗಿ ಬಸ್ ರಸ್ತೆಗಿಳಿಯಲಿದೆ -ಉಡುಪಿ ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆಯಲ್ಲಿ ನಾಳೆ ಬೆಳಿಗ್ಗೆಯಿಂದ ಖಾಸಗಿ ಮತ್ತು ಸರಕಾರಿ ಬಸ್ಸುಗಳು ಓಡಾಟ ಆರಂಭಿಸಲಿದೆ. ಜನತಾ ಕರ್ಫ್ಯೂ ಘೋಷಣೆಯಾದ ನಂತರ ಉಡುಪಿ ಜಿಲ್ಲೆಯಲ್ಲಿ ಯಾವುದೇ ಬಸ್ ಸಂಚಾರ ಇರಲಿಲ್ಲ.

ಇದೀಗ ಮೇ 13 ಬೆಳಗ್ಗೆಯಿಂದ ಜಿಲ್ಲೆಯ ಒಳಗೆ ಖಾಸಗಿ ಮತ್ತು ಸರಕಾರಿ ಬಸ್ಸುಗಳು ಸೇವೆ ಆರಂಭಿಸಲಿದೆ. ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಮಾಹಿತಿ ನೀಡಿದ್ದಾರೆ. ಶೇಕಡ ಐವತ್ತು ಪ್ರಯಾಣಿಕರು ಮಾತ್ರ ಒಂದೊಂದು ಬಸ್ ನಲ್ಲಿ ಓಡಾಡಬಹುದು.

ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಮಾಸ್ಕ್ ಧರಿಸಿದ ಪ್ರಯಾಣಿಕರನ್ನು ಬಸ್‌ ಒಳಗೆ ಬಿಟ್ಟುಕೊಳ್ಳಬೇಡಿ ಎಂದು ಜಿಲ್ಲಾಧಿಕಾರಿ ಬಸ್ ನಿರ್ವಾಹಕರಿಗೆ ಚಾಲಕರಿಗೆ ಸೂಚನೆ ಕೊಟ್ಟಿದ್ದಾರೆ.

ಮಾಸ್ಕ್ ತಲೆಗೆ ಹಾಕಿಕೊಳ್ಳುವುದಾಗಿ ಕುತ್ತಿಗೆಗೆ ನೇತಾಡಿಸುವುದು ಮಾಡಿದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ಕೆಎಸ್ ಆರ್ ಟಿಸಿ ಯ ಅಧಿಕಾರಿಗಳು ರೂಟ್ ಸರ್ವೆ ಮುಗಿಸಿದ್ದು ಅಗತ್ಯ ಇರುವ ರಸ್ತೆಗಳಲ್ಲಿ ಬಸ್ ಗಳನ್ನು ಓಡಿಸಲಿದ್ದಾರೆ.

ಖಾಸಗಿ ಬಸ್ ಮಾಲಕರ ಸಂಘದಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು ಕೆಲವು ಖಾಸಗಿ ಬಸ್ಸುಗಳು ನಾಳೆ ರಸ್ತೆಗಿಳಿಯಲಿದೆ. ಸರ್ಕಾರದ ನಿಯಮಗಳನ್ನು ಪಾಲಿಸಿ ಸ್ಯಾನಿಟೈಸರ್ ಕೊಟ್ಟು ಮಾಸ್ಕ್ ಧರಿಸುವಂತೆ ನೋಡಿಕೊಂಡು ಬಸ್ ಓಡಿಸುವುದು ಕಷ್ಟ ಸಾಧ್ಯ ಎಂದು ಕೆಲ ಬಸ್ ಮಾಲಕರು ಬಸ್ ಓಡಿಸದಿರಲು ನಿರ್ಧಾರ ಮಾಡಿದ್ದಾರೆ.

LEAVE A REPLY

Please enter your comment!
Please enter your name here