ಉದ್ಯಮಿಗಳ ಸಾಲ ಮನ್ನಾ ಮಾಡಿದ ಮೋದಿ – ಬೆಂಬಲ ಬೆಲೆ ಹೆಸರಲ್ಲಿ ರೈತರಿಗೆ ಮೋಸ – ಸಿದ್ದರಾಮಯ್ಯ ಕಿಡಿ

ಉದ್ಯಮಿಗಳ ಸಾವಿರಾರು ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ ಪ್ರಧಾನಿ ನರೇಂದ್ರ ಮೋದಿ ರೈತರ ಸಾಲವನ್ನು ಒಂದು ಬಾರಿಯೂ ಮನ್ನಾ ಮಾಡಲಿಲ್ಲ. ಬೆಂಬಲ ಬೆಲೆ ಹೆಸರಲ್ಲಿ ರೈತರಿಗೆ ಮೋಸ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ನಿನ್ನೆಯಷ್ಟೇ ಮೋದಿ ಸರ್ಕಾರ ೧೪ ಮುಂಗಾರು ಬೆಳೆಗಳ ಬೆಂಬಲ ಬೆಲೆಯನ್ನು ಹೆಚ್ಚಿಸಿ ಘೋಷಣೆ ಮಾಡಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ,

ಉದ್ಯಮಿಗಳ ಸಾವಿರಾರು ಕೋಟಿ ರೂಪಾಯಿ ಸಾಲ ಮನ್ನಾ ಮಾಡುತ್ತಿರುವ  @PMOIndia ರೈತರ ಸಾಲವನ್ನು ಒಂದು ಬಾರಿ ಮನ್ನಾ ಮಾಡಿ ಎಂಬ ರೈತರ ಬೇಡಿಕೆಗೆ ಕಿವಿ ಕೊಟ್ಟಿಲ್ಲ. ಯುಪಿಎ ಸರ್ಕಾರ ಸಾಲ ಮನ್ನಾ ಮಾಡಿದ್ದೇ ಕೊನೆ. ಅಲ್ಲಿಂದೀಚೆಗೆ ನಯಾ ಪೈಸೆ ಸಾಲ ಮನ್ನಾ ಆಗಿಲ್ಲ.

ಕೊರೊನಾ ಹಾವಳಿಯ ಈ ಕಾಲದಲ್ಲಿ ರೈತರ ಉತ್ಪಾದನಾ ವೆಚ್ಚ ಗಣನೀಯವಾಗಿ ಏರುವ ಸಾಧ್ಯತೆ ಇದೆ. ಈ ಸಂದರ್ಭಕ್ಕೆ ತಕ್ಕಂತೆ ಕನಿಷ್ಠ ಬೆಂಬಲ ಬೆಲೆಯನ್ನು ನಿರ್ಧರಿಸಿ ನೆರವಾಗಬೇಕಾಗಿದ್ದ @PMOIndia ರೈತರಿಗೆ ಮೋಸ ಮಾಡಿದೆ.

ಕೃಷಿ ತಜ್ಞ ಸ್ವಾಮಿನಾಥನ್ ವರದಿ ಪ್ರಕಾರ ರೈತರ ಬೆಳೆಗೆ ನೀಡುವ ಯೋಗ್ಯ ಬೆಲೆ ಎಂದರೆ ‘C-2 ಉತ್ಪಾದನಾ ವೆಚ್ಚ’ಕ್ಕಿಂತ ಎರಡು ಪಟ್ಟು ಹೆಚ್ಚಿನ ಕನಿಷ್ಠ ಬೆಂಬಲ ಬೆಲೆ. @PMOIndia ಘೋಷಿತ ಕನಿಷ್ಠ ಬೆಂಬಲ ಬೆಲೆ ಸ್ವಾಮಿನಾಥನ್ ವರದಿ ಹೇಳಿರುವ ಯೋಗ್ಯ ಬೆಲೆಯೇ?

ಕೃಷಿ ತಜ್ಞ ಎಂ.ಎಸ್ ಸ್ವಾಮಿನಾಥನ್ ವರದಿಯ ಪ್ರಕಾರ ‘C-2 ಉತ್ಪಾದನಾ ವೆಚ್ಚ’ ಎಂದರೆ ಬೀಜ,ಗೊಬ್ಬರ ಮತ್ತು ಹೊರಕೂಲಿಯ ಜೊತೆ ಭೂ ಸವಕಳಿ ವೆಚ್ಚ, ಹೂಡಿದ ಬಂಡವಾಳದ ಮೇಲಿನ ಬಡ್ಡಿ ಮತ್ತು ರೈತ ಕುಟುಂಬದ ಕೂಲಿಯನ್ನೂ ಪರಿಗಣಿಸಬೇಕಾಗುತ್ತದೆ. @PMOIndia C-2 ಸೂತ್ರ ಪಾಲಿಸಿದೆಯೇ?

ರೈತರ ಬೆಳೆಯ ಉತ್ಪಾದನಾ ವೆಚ್ಚಕ್ಕೆ ಶೇಕಡಾ 50ರಷ್ಟು ಲಾಭವನ್ನು ಸೇರಿಸಿ ಕನಿಷ್ಠ ಬೆಂಬಲ ಬೆಲೆ ನೀಡುತ್ತೇವೆ ಎಂಬುದು @narendramodi ಘೋಷಣೆಯಾಗಿತ್ತು. ಆದರೆ ಉತ್ಪಾದನಾ ವೆಚ್ಚದ ಲೆಕ್ಕದಲ್ಲಿಯೇ @PMOIndia ರೈತರಿಗೆ ಮೋಸ ಮಾಡಿದೆ.

ಹದಿನಾಲ್ಕು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಿರುವ @PMOIndia ಇದರಿಂದ ರೈತರ ಬೆಳೆಗೆ ದುಪ್ಪಟ್ಟು ಬೆಲೆ ಸಿಗಲಿದೆ ಎಂದು ಹೇಳಿಕೊಳ್ಳುತ್ತಿರುವುದು ಅಮಾಯಕ ರೈತರ ಹಾದಿ ತಪ್ಪಿಸುವ ಕುತಂತ್ರ 

ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

LEAVE A REPLY

Please enter your comment!
Please enter your name here