ಎಸ್‌ಎಸ್‌ಎಲ್‌ಸಿ ಗಿಂತ ದೊಡ್ಡ ಪರೀಕ್ಷೆ ಕೊರೊನಾ ವಿರುದ್ಧ ಹೋರಾಡುವುದು- ಸಚಿವ ಎಸ್. ಸುರೇಶ್‌ ಕುಮಾರ್

ರಾಜ್ಯದ ಜನತೆ ಇದನ್ನು ಗಮನಿಸಲೇಬೇಕು.. ಮೇ 3ರವರೆಗೂ ಲಾಕ್ ಡೌನ್‌ ಜಾರಿಯಲ್ಲಿರುವುದರಿಂದ ಆ ಬಳಿಕ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.‌ ಸುರೇಶ್‌ ಕುಮಾರ್‌ ಹೇಳಿದ್ದಾರೆ.

ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 27ರಿಂದ ಆರಂಭವಾಗಬೇಕಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಮುಂದೂಡಲಾಗಿತ್ತು.

ಎಸ್‌ಎಸ್‌ಎಲ್‌ಸಿ ಗಿಂತ ದೊಡ್ಡ ಪರೀಕ್ಷೆ ಕೊರೊನಾ ವಿರುದ್ಧ ಹೋರಾಡುವುದು. ಯಾವ ಸಮಯದಲ್ಲಿ ಮಾಡಬೇಕು, ವಿದ್ಯಾರ್ಥಿಗಳಿಗೆ ಎಷ್ಟು ಸಮಯ ಕೊಡಬೇಕು ಎಂಬುವುದನ್ನು ಮೇ 3ರ ನಂತರ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ,

ಸಾರ್ವಜನಿಕರಲ್ಲಿ ಇದರ ಬಗ್ಗೆ ಸಾಕಷ್ಟು ಗೊಂದಲಗಳಿವೆ, ಆದರೆ ವಿದ್ಯಾರ್ಥಿಗಳಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ. ಕೆಲವು ಪೋಷಕರು ಆತಂಕದಲ್ಲಿದ್ದಾರೆ. ಮೇ 3ರ ನಂತರ ಒಂದು ನಿರ್ಧಾರಕ್ಕೆ ಬಂದು ಎಲ್ಲಾ ಗೊಂದಲಗಳಿಗೆ ತೆರೆ ಬೀಳಲಿದೆ ಎಂದು ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here