ಎಸ್‌ಎಸ್‌ಎಲ್‌ಸಿ, ಪಿಯುಸಿ, ಸಿಬಿಎಸ್‌ಇ ಪರೀಕ್ಷಾ ವೇಳಾಪಟ್ಟಿ ಪ್ರಕಟ – ಇತ್ತ ಎಲ್‌ಕೆಜಿ, ಯುಕೆಜಿಗೆ ಆನ್‌ಲೈನ್‌ ಕ್ಲಾಸ್‌ ಇಲ್ಲ

ಎಸ್‌ಎಸ್‌ಎಲ್‌ಸಿ ಮತ್ತು ಬಾಕಿ ಇರುವ ದ್ವಿತೀಯ ಪಿಯುಸಿ ಪರೀಕ್ಷೆಯ ಇಂಗ್ಲೀಷ್‌ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಇದರ ಜೊತೆಗೆ ಸಿಬಿಎಸ್‌ಇಯ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗೂ ಇವತ್ತೇ ವೇಳಾಪಟ್ಟಿ ಘೋಷಣೆ ಆಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಾವಾಗ..?

ಬೆಂಗಳೂರಲ್ಲಿ ಸುದ್ದಿಗೋಷ್ಢಿ ನಡೆಸಿದ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯ ಇಂಗ್ಲೀಷ್‌ ಪರೀಕ್ಷೆಗೆ ದಿನಾಂಕ ಪ್ರಕಟಿಸಿದರು.

 1. ಜೂನ್‌ 25ರಿಂದ ಜುಲೈ 4ರವರೆಗೆ ಒಟ್ಟು 10 ದಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ.
 2. ಜೂನ್‌ 18ರಂದು ಬಾಕಿ ಇರುವ ದ್ವಿತೀಯ ಪಿಯುಸಿಯ ಇಂಗ್ಲೀಷ್‌ ಪರೀಕ್ಷೆ ನಡೆಯಲಿದೆ.
 3. ಗಣಿತ, ಇಂಗ್ಲೀಷ್‌, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆಗಳ ನಡುವೆ ಒಂದೊಂದು ದಿನ ಗ್ಯಾಪ್‌ ನೀಡಲಾಗುತ್ತದೆ. ಆದರೆ ಕನ್ನಡ ಹಾಗೂ ಹಿಂದಿ ಪರೀಕ್ಷೆಗೆ ಒಂದು ದಿನದ ಅಂತರವಿರಲ್ಲ.
 4. ಹಾಸ್ಟೆಲ್‌ಗಳಲ್ಲಿರುವ ವಿದ್ಯಾರ್ಥಿಗಳು ಒಂದು ವೇಳೆ ತಮ್ಮ ಊರುಗಳಿಗೆ ಹೋಗಿದ್ದರೆ ಅವರು ಯಾವ ಊರಲ್ಲಿದ್ದಾರೋ ಆ ಊರಲ್ಲೇ ಇರುವ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುವುದಕ್ಕೆ ಅನುಮತಿ ನೀಡಲಾಗಿದೆ.
 5. ವಲಸೆ ಕಾರ್ಮಿಕರ ಮಕ್ಕಳಿಗೂ ಅವರು ಎಲ್ಲಿದ್ದಾರೋ ಅಲ್ಲೇ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿದೆ. ಅಂತಹ ವಿದ್ಯಾರ್ಥಿಗಳು ತಮ್ಮ ಊರಲ್ಲಿರುವ ಹತ್ತಿರ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಅಗತ್ಯ ಮಾಹಿತಿಗಳನ್ನು ಮೇ 25ರೊಳಗೆ ಸಲ್ಲಿಕೆ ಮಾಡಬೇಕು.
 6. ಪ್ರತಿಯೊಬ್ಬ ವಿದ್ಯಾರ್ಥಿಗೂ ಪ್ರತಿ ದಿನ ಪರೀಕ್ಷೆಗೂ ಮೊದಲು ಥರ್ಮಲ್‌ ಸ್ಕ್ರೀನಿಂಗ್‌ ಮೂಲಕ ಆರೋಗ್ಯ ತಪಾಸಣೆ ಮಾಡಲಾಗುತ್ತದೆ.
 7. ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳು ಫ್ರೀಯಾಗಿ ಬಸ್‌ಗಳಲ್ಲಿ ಓಡಾಡಬಹುದಾಗಿದೆ.
 8. ಪ್ರತಿ ದಿನ ವಿದ್ಯಾರ್ಥಿಗಳಿಗೆ ಸರ್ಕಾರವೇ ಮಾಸ್ಕ್‌ ವಿತರಣೆ ಮಾಡುತ್ತದೆ.
 9. ರಾಜ್ಯದಲ್ಲಿ ಈ ವರ್ಷ 8 ಲಕ್ಷದ 46 ಸಾವಿರ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ.
 10. ಆರೋಗ್ಯ ಸರಿಯಿಲ್ಲದ ವಿದ್ಯಾರ್ಥಿಗಳಿಗೆ ಅವರ ಪರೀಕ್ಷಾ ಕೇಂದ್ರದಲ್ಲೇ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗುತ್ತದೆ.
 11. ಜೂನ್‌ 21ರ ಬಳಿಕ ದ್ವಿತೀಯ ಪಿಯುಸಿ ಉತ್ತರಪತ್ರಿಕೆಗಳ ಮೌಲ್ಯ ಮಾಪನ ಆರಂಭವಾಗಲಿದೆ.

ಆನ್‌ಲೈನ್‌ ಕ್ಲಾಸ್‌ ನಡೆಸುವಂತಿಲ್ಲ:

ರಾಜ್ಯದಲ್ಲಿರುವ ಖಾಸಗಿ ಶಾಲೆಗಳು ಎಲ್‌ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಆನ್‌ಲೈನ್‌ ತರಗತಿಗಳನ್ನು ನಡೆಸುವಂತಿಲ್ಲ. ಒಂದು ವೇಳೆ ಸರ್ಕಾರದ ಸೂಚನೆಯನ್ನೂ ಮೀರಿ ಆನ್‌ಲೈನ್‌ ಕ್ಲಾಸ್‌ ನಡೆಸಿದರೆ ಅಂತಹ ಶಾಲೆಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಎಚ್ಚರಿಸಿದ್ದಾರೆ.

ಸಿಬಿಎಸ್‌ಇ ಪರೀಕ್ಷಾ ವೇಳಾಪಟ್ಟಿ:

ಇತ್ತ ಇಡೀ ದೇಶದಲ್ಲಿ ಬಾಕಿ ಇರುವ 10ನೇ ಮತ್ತು 12ನೇ ತರಗತಿ ಪರೀಕ್ಷೆಗೂ ಸಿಬಿಎಸ್‌ಇ ವೇಳಾಪಟ್ಟಿ ಪ್ರಕಟಿಸಿದೆ. ಬಾಕಿ ಇರುವ ಪರೀಕ್ಷೆಗಳು ಜುಲೈ 1ರಿಂದ ಜುಲೈ 15ರವರೆಗೂ ನಡೆಯಲಿದೆ.

LEAVE A REPLY

Please enter your comment!
Please enter your name here