ಎಸ್‌ಸಿ/ಎಸ್‌ಟಿಗಳಿಗೆ ಉದ್ಯೋಗದಲ್ಲಿ ಮೀಸಲಾತಿ ತೆಗೆದು ಹಾಕಿದ್ದು ಉತ್ತರಾಖಂಡ್‌ನ ಕಾಂಗ್ರೆಸ್‌ ಸರ್ಕಾರ..!

ಉದ್ಯೋಗದಲ್ಲಿ ಎಸ್‌ಸಿ ಎಸ್‌ಟಿ ಸಮುದಾಯಕ್ಕೆ ಮೀಸಲಾತಿ ಕಡ್ಡಾಯವಲ್ಲ ಎಂಬ ಸುಪ್ರೀಂಕೋರ್ಟ್‌ನ ತೀರ್ಪಿಗೆ ಉತ್ತರಾಖಂಡ್‌ನಲ್ಲಿದ್ದ ಕಾಂಗ್ರೆಸ್‌ ಸರ್ಕಾರದ ತೀರ್ಮಾನವೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ತಿರುಗೇಟು ನೀಡಿದೆ.

2012ರ ಸೆಪ್ಟೆಂಬರ್‌ 5ರಂದು ಲೋಕೋಪಯೋಗಿ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಉತ್ತರಾಖಂಡ್‌ ಸರ್ಕಾರ ಅರ್ಜಿಗಳನ್ನು ಆಹ್ವಾನಿಸಿತ್ತು. ಆ ಅಧಿಸೂಚನೆಯಲ್ಲಿ ಎಸ್‌ಸಿ ಎಸ್‌ಟಿಗಳಿಗೆ ಮೀಸಲಾತಿಯನ್ನು ಕೊಟ್ಟಿರಲಿಲ್ಲ. ಆ ನೇಮಕಾತಿ ಆದೇಶವೇ ʻರಾಜ್ಯ ಸರ್ಕಾರಗಳು ಮೀಸಲಾತಿ ನೀಡುವುದು ಕಡ್ಡಾಯವೇನಲ್ಲʼ ಎಂದು ಶುಕ್ರವಾರ ಸುಪ್ರೀಂಕೋರ್ಟ್‌ನ ತ್ರಿಸದಸ್ಯ ತೀರ್ಪಿಗೆ ಮೂಲವಾಗಿತ್ತು.

ಮಾರ್ಚ್‌ 12, 2012ರಿಂದ ಜನವರಿ 31, 2014ರವರೆಗೆ ವಿಜಯ್‌ ಬಹುಗುಣ ಕಾಂಗ್ರೆಸ್‌ನ ಸಿಎಂ ಆಗಿದ್ದರು.

ಲೋಕಸಭೆಯಲ್ಲಿ ಕಾಂಗ್ರೆಸ್‌ ಸೇರಿದಂತೆ ವಿಪಕ್ಷಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಪರ ಉತ್ತರಿಸಿದ ಕೇಂದ್ರ ಸಾಮಾಜಿಕ ನ್ಯಾಯಗಳ ಖಾತೆ ಸಚಿವ ಥವರ್‌ಚಂದ್‌ ಗೆಹ್ಲೋಟ್‌ ಈ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಪ್ರತಿವಾದಿ ಆಗಿರಲಿಲ್ಲ ಎಂದು ಸ್ಪಷ್ಟಪಡಿಸಿದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

LEAVE A REPLY

Please enter your comment!
Please enter your name here