ನಮ್ಮ ಪಕ್ಷ , ಕುಟುಂಬ ಇಬ್ಬಾಗವಾಗಿದೆ- ಪವಾರ್ ಪುತ್ರಿ ಸುಪ್ರಿಯಾ ಸುಲೆ

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗೆ ಸಂಬಂಧಿಸಿದಂತೆ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಪುತ್ರಿ ಸಂಸದೆ ಸುಪ್ರಿಯಾ ಸುಲೆ, “ನಮ್ಮ ಪಕ್ಷ ,ಕುಟುಂಬ ಇಬ್ಬಾಗವಾಗಿದೆ” ಎಂದು ಶನಿವಾರ ಬೆಳಿಗ್ಗೆ ೧೧ ಗಂಟೆಗೆ ತಮ್ಮ ವಾಟ್ಸಪ್ ಸ್ಟೇಟಸ್ನಲ್ಲಿ ಬರೆದುಕೊಂಡಿದ್ದಾರೆ.

 

ಇಂದು ಬೆಳ್ಳಂಬೆಳಗ್ಗೆ ಬಿಜೆಪಿ- ಎನ್‍ಸಿಪಿ ಶಾಸಕಾಂಗ ನಾಯಕ ಅಜಿತ್ ಪವಾರ್ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಿದೆ. ಶರದ್ ಪವಾರ್ ಅವರಿಗೂ ಸೂಚಿಸದೇ ಅಜಿತ್ ಪವಾರ್ ಬಿಜೆಪಿಗೆ ತಮ್ಮ ಬೆಂಬಲ ನೀಡಿದ್ದಾರೆ ಎಂದು ವರದಿಯಾಗಿದೆ. ಇಂದು ಬೆಳಗ್ಗೆ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ ಮತ್ತು ಅಜಿತ್ ಪವಾರ್ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

 

LEAVE A REPLY

Please enter your comment!
Please enter your name here