ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ.

ಸುಮಾರು 500ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ ಖ್ಯಾತ ಹಿರಿಯ ಕಲಾವಿದ ಲೋಹಿತಾಶ್ವ (80) ಇಂದು ನಿಧನರಾಗಿದ್ದಾರೆ‌. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಕುಮಾರಸ್ವಾಮಿ ಲೇಜೌಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಮಧ್ಯಾಹ್ನ 2.45ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ.

ಲೋಹಿತಾಶ್ವ ಅವರು ಆಗಸ್ಟ್ 5, 1942ರಂದುತುಮಕೂರಿನ ತೊಂಡಗೆರೆಯಲ್ಲಿ ಜನಿಸಿದ ಇವರು ಎಂ ಎ ಇಂಗ್ಲಿಷ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದು ನಂತರ 33 ವರ್ಷಗಳ ಕಾಲ ಪ್ರಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.
ಚಿಕ್ಕ ವಯಸ್ಸಿನಲ್ಲೇ ನಟನೆಯಲ್ಲಿ ಆಸಕ್ತಿಯಿದ್ದ ಅವರು 500 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು. ಪೋಷಕ ಪಾತ್ರಗಳಲ್ಲಿ ಅದರಲ್ಲೂ ಮುಖ್ಯಮಂತ್ರಿ, ಪೊಲೀಸ್ ಪಾತ್ರಗಳಲ್ಲಿ ನಟಿಸಿ ಗಮನ ಸೆಳೆದಿದ್ದರು ..

ಕನ್ನಡ ಚಿತ್ರರಂಗದಲ್ಲಿ ತಮ್ಮ ಅದ್ಭುತ ಧ್ವನಿಯ ಮೂಲಕ ಎಲ್ಲರಿಗೂ ಪರಿಚರಾಗಿದ್ದಾರೆ. ಇವರ ಸಾಧನೆಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ(1997), ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ(2006) ಲಭಿಸಿತ್ತು. ಇವರಿಗೆ ಮೂವರು ಮಕ್ಕಳಿದ್ದು, ಖ್ಯಾತ ಖಳ ನಟ ಶರತ್ ಲೋಹಿತಾಶ್ವ ಒಬ್ಬರು.

ಅಭಿಮನ್ಯು, AK 47, ಅವತಾರ ಪುರುಷ, ಚಿನ್ನ, ಹೊಸ ನೀರು, ಗಜೇಂದ್ರ, ವಿಶ್ವ, ಪ್ರತಾಪ್, ಪೊಲೀಸ್ ಲಾಕಪ್, ರೆಡಿಮೇಡ್ ಗಂಡ, ಸ್ನೇಹಲೋಕ, ಸುಂದರಕಾಂಡ, ಸಿಂಹದ ಮರಿ, ಮೂರು ಜನ್ಮ, ಸಾಂಗ್ಲಿಯಾನ, ಟೈಮ್ ಬಾಂಬ್, ಲಾಕಪ್ ಡೆತ್, ಸಂಭವಾಮಿ ಯುಗೇ ಯುಗೇ, ರಣಚಂಡಿ, ಸಮಯದ ಗೊಂಬೆ, ಸಂಗ್ರಾಮ, ನ್ಯೂ ಡೆಲ್ಲಿ, ಸಾರಥಿ ಸೇರಿದಂತೆ ಸಾಕಷ್ಟು ಜನಪ್ರಿಯ ಸಿನಿಮಾಗಳಲ್ಲಿ ಅವರ ಅಭಿನಯ ಅತ್ಯಧ್ಬುತ.

LEAVE A REPLY

Please enter your comment!
Please enter your name here