ಕರ್ನಾಟಕದಲ್ಲೂ ಹಿಂಸಾತ್ಮಕ ಪ್ರತಿಭಟನಾಕಾರರ ಆಸ್ತಿ ಜಪ್ತಿನಾ..?

ಪ್ರತಿಭಟನೆಯ ವೇಳೆ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದರೆ ಅಂತವರ ಆಸ್ತಿಪಾಸ್ತಿಗಳನ್ನು ಜಪ್ತಿ ಮಾಡುವುದಾಗಿ ಕರ್ನಾಟಕದ ಬಿಜೆಪಿ ಸರ್ಕಾರ ಎಚ್ಚರಿಕೆ ನೀಡಿದೆ.

ಉತ್ತರ ಪ್ರದೇಶದಲ್ಲಿನ ಯೋಗಿ ಆದಿತ್ಯನಾಥ ಸರ್ಕಾರದ ಹಾದಿಯಲ್ಲಿ ಆಸ್ತಿಯ ಕ್ರಮಕೈಗೊಳ್ಳಲು ತೀರ್ಮಾನಿಸಿದೆ.

ಪ್ರತಿಭಟನಾಕಾರರು ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದರೆ ಅಂತವರ ಆಸ್ತಿಪಾಸ್ತಿಗಳನ್ನು ಜಪ್ತಿ ಮಾಡಿಕೊಳ್ಳಲು ನೆರವಾಗುವ ಕಾನೂನನ್ನು ಜಾರಿಗೆ ತೆರಬೇಕಾಗುತ್ತದೆ ಎಂದು ಬೆಂಗಳೂರಲ್ಲಿ ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಉತ್ತರಪ್ರದೇಶದ ರಾಂಪುರ ಜಿಲ್ಲೆಯಲ್ಲಿ ಪ್ರತಿಭಟನೆಯ ವೇಳೆ ಪೊಲೀಸರ ವಾಹನ ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಧ್ವಂಸ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಪೊಲೀಸರು 28 ಮಂದಿಗೆ ನೋಟಿಸ್ ನೀಡಿದ್ದರು. ಅಲ್ಲದೆ ನಷ್ಟದ ಮೊತ್ತ 14. 86 ಲಕ್ಷ ರೂಪಾಯಿಗಳನ್ನು ನಿಮ್ಮ ಆಸ್ತಿ ಜಪ್ತಿ ಮಾಡುವ ಮೂಲಕ ಯಾಕೆ ವಸೂಲಿ ಮಾಡಬಾರದು ಎಂದು ನೋಟಿಸ್ ನೀಡಿದ್ದಾರೆ.

LEAVE A REPLY

Please enter your comment!
Please enter your name here