ಕಾರ್ಕಳ: ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಹಿನ್ನೆಲೆ ಕೋಟಿ ಕಂಠ ಗಾಯನ ಕಾರ್ಯಕ್ರಮ ಆಯೋಜಿಸಲಾಯಿತು.
ನಗರ ಬಿಜೆಪಿ ನೇತೃತ್ವದಲ್ಲಿ ಶಿರಡಿ ಸಾಯಿ ಕಾಲೇಜು ಕಾರ್ಕಳ, ಲಯನ್ಸ್ ಕ್ಲಬ್ ಕಾರ್ಕಳ ಸಿಟಿ, ಆಟೋ ರಿಕ್ಷಾ ಚಾಲಕರು/ ಮಾಲಕರು ಬಸ್ಸು ನಿಲ್ದಾಣ ಕಾರ್ಕಳ, ಹಿರಿಯ ನಾಗರಿಕರ ವೇದಿಕೆ ಕಾರ್ಕಳ, ಸುಂದರ ಪುರಾಣಿಕ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಇವರ ಸಹಯೋಗದಲ್ಲಿ ಈ ಕಾರ್ಯಕ್ರಮ ಮೂಡಿಬಂತು.
ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾ ಡಾ. ಜಗದೀಶ್ ಪೈ ಕನ್ನಡ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಚಂದ್ರಹಾಸ ಸುವರ್ಣ,ಎಸ್ ನಿತ್ಯಾನಂದ ಪೈ, ರಾಮಚಂದ್ರ ನಾಯಕ್, ಸಂತೋಷ ರಾವ್ ಪ್ರಭಾಕರ ಸುವರ್ಣ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು. ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಿರಂಜನ್ ಜೈನ್ ಈ ಕಾರ್ಯಕ್ರಮವನ್ನು ಸ್ವಾಗತಿಸಿ ನಗರ ಅಧ್ಯಕ್ಷರಾದ ರವೀಂದ್ರ ಮೊಯಿಲಿ ವಂದನಾರ್ಪಣೆಗೈದರು.