ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ನೇತೃತ್ವದಲ್ಲಿ ಕ್ವಾರಂಟೈನ್‌ನಲ್ಲಿರುವ ಸಾವಿರಕ್ಕೂ ಹೆಚ್ಚು ಮಂದಿಗೆ ಕಷಾಯ ವಿತರಣೆ

ವಿಶ್ವದಾದ್ಯಂತ ಮಹಾಮಾರಿ ಕೊರೋನ ಅಟ್ಟಹಾಸ ಮೆರೆಯುತ್ತಿದೆ. ಕೋವಿಡ್ 19 ಗೆ ಇನ್ನು ಚುಚ್ಚು ಮದ್ದು ಸಿಕ್ಕಿಲ್ಲ. ವಿಶ್ವದ ಎಲ್ಲಾ ದೇಶಗಳು ಕೊರೋನ ಚುಚ್ಚು ಮದ್ದನ್ನು ಕಂಡು ಹುಡುಕುವಲ್ಲಿ ವಿಶ್ವ ಹಗಲು ರಾತ್ರಿ ಶ್ರಮಿಸುತ್ತಿವೆ.

ಈ ನಡುವೆ ಕೊರೋನಾ ವೈರಸ್ ದೇಹಕ್ಕೆ ಬಾಧಿಸದಂತೆ ಆಯುರ್ವೇದದಲ್ಲಿ ಚಿಕಿತ್ಸೆ ಇದೆ ಎಂದು ಆಯುಷ್ ಇಲಾಖೆ ಹೇಳಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಇದನ್ನು ಪ್ರಯೋಗ ಮಾಡಲಾಗುತ್ತಿದೆ.

ಕಾರ್ಕಳ ಶಾಸಕ ಸುನೀಲ್ ಕುಮಾರ್ ನೇತೃತ್ವದಲ್ಲಿ ತಾಲೂಕಿನಾದ್ಯಂತ ಕಷಾಯ ವಿತರಣೆ ಆರಂಭಿಸಲಾಗಿದೆ. ಸುಮಾರು ಒಂದು ಸಾವಿರಕ್ಕಿಂತಲೂ ಹೆಚ್ಚು ಜನ ಹೊರ ರಾಜ್ಯದಿಂದ ಬಂದವರು ಕಾರ್ಕಳ ಮತ್ತು ಹೆಬ್ರಿ ತಾಲ್ಲೂಕಿನಲ್ಲಿ ಕ್ವಾರಂಟೈನ್ ಆಗಿದ್ದಾರೆ.

ಶುಂಠಿ- ಅರಿಶಿನ ,ಬೆಲ್ಲ -ಏಲಕ್ಕಿ -ನಿಂಬೆ ಹಣ್ಣು ಮುಂತಾದ ದ್ರವ್ಯಗಳನ್ನು ಮಿಶ್ರಣ ಮಾಡಿ ಕಷಾಯ ತಯಾರಿಸಲಾಗುತ್ತದೆ. ಇದಕ್ಕೆ ಕರಾವಳಿಯ ಖಡಕ್ ಕಾಳುಮೆಣಸನ್ನು ಸೇರಿಸಲಾಗುತ್ತಿದೆ.

ಈ ಎಲ್ಲ ದ್ರವ್ಯಗಳಲ್ಲಿ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು ಮಾಡುವ ಸಾಮರ್ಥ್ಯ ಇದೆ ಎಂಬುದು ಆಯುಷ್ ಇಲಾಖೆಯ ಅಭಿಪ್ರಾಯ. ಹೀಗಾಗಿ ಇದನ್ನು ಕಾರ್ಕಳದಲ್ಲಿ ಪ್ರಯೋಗಕ್ಕೆ ತರಲಾಗಿದೆ.

ಮಹಾರಾಷ್ಟ್ರ ತೆಲಂಗಾಣ ಕೇರಳ ತಮಿಳುನಾಡು ಸೇರಿದಂತೆ ದೇಶದ ಸುಮಾರು ಏಳೆಂಟು ರಾಜ್ಯಗಳಿಂದ ಉಡುಪಿಗೆ ವಾಪಸ್ ಆಗಿರುವವರಿಗೆ ಈ ಕಷಾಯವನ್ನು ಕೊಡಲಾಗುತ್ತಿದೆ.

ಈಗಾಗಲೇ ಕೊರೋನ ರೋಗಿಗಳಿಗೆ ಒಂದು ಕಡೆಯಿಂದ ಚಿಕಿತ್ಸೆ ನಡೆಯುತ್ತಿದ್ದರೆ ಕೊರೋನ ಬಾರದಂತೆ ತಡೆಗಟ್ಟುವುದು ಮತ್ತು ಮುನ್ನೆಚ್ಚರಿಕೆ ವಹಿಸುವ ಕೆಲಸ ಇನ್ನೊಂದು ಕಡೆಯಿಂದ ಆಗುತ್ತಿದೆ.

LEAVE A REPLY

Please enter your comment!
Please enter your name here