ಕಾಶ್ಮೀರಿ ವಿದ್ಯಾರ್ಥಿಗಳಿಂದ ಪಾಕ್‌ ಪರ ಘೋಷಣೆ – ವಕೀಲರ ವಿರುದ್ಧ ನ್ಯಾಯಾಂಗ ನಿಂದನೆ ಎಚ್ಚರಿಕೆ ಕೊಟ್ಟ ಹೈಕೋರ್ಟ್‌

ಪಾಕಿಸ್ತಾನ ಜಿಂದಾಬಾದ್‌ ಎಂದು ಘೋಷಣೆ ಕೂಗಿದ ಕಾಶ್ಮೀರ ಮೂಲದ ವಿದ್ಯಾರ್ಥಿಗಳ ಜಾಮೀನು ಅರ್ಜಿ ಪರ ವಾದಿಸಲು ಅವಕಾಶ ಕೊಡದೇ ಹೋದಲ್ಲಿ ನ್ಯಾಯಾಂಗ ನಿಂದನೆಯಡಿ ಅಂತಹ ವಕೀಲರ ವಿರುದ್ಧವೇ ಕ್ರಮಕೈಗೊಳ್ಳಬೇಕಾಗುತ್ತದೆ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ಮತ್ತು ನ್ಯಾಯಮೂರ್ತಿ ಹೇಮಂತ್‌ ಚಂದನ್‌ಗೌಡರ್‌ ಅವರಿದ್ದ ದ್ವಿಸದಸ್ಯ ವಿಭಾಗೀಯ ಪೀಠ ಮೌಖಿಕ ಎಚ್ಚರಿಕೆ ನೀಡಿದೆ.

ಧಾರವಾಡದ ಕೋರ್ಟ್‌ ಆವರಣದಲ್ಲಿ ನಡೆದಿದ್ದ ಪ್ರತಿಭಟನೆಗೆ ಹುಬ್ಬಳ್ಳಿ ವಕೀಲರ ಸಂಘ ಕೈಗೊಂಡ ನಿರ್ಣಯವೇ ಮೂಲ ಕಾರಣ ಎಂದೂ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳ ಪರ ಯಾರೂ ವಕಾಲತ್ತು ವಹಿಸಬಾರದು ಎಂದು ಫೆಬ್ರವರಿ 15 ರಂದು ಕೈಗೊಂಡಿದ್ದ ನಿರ್ಣಯವನ್ನು ಮಾರ್ಪಾಡು ಮಾಡಿ ವಕಾಲತ್ತು ವಹಿಸಲು ವಕೀಲರಿಗೆ ಅವಕಾಶ ಮಾಡಿಕೊಡುವುದಾಗಿ ಹುಬ್ಬಳ್ಳಿ ವಕೀಲರ ಸಂಘದ ಪರ ಅಡ್ವೋಕೇಟ್‌ ಜನರಲ್‌ ಪ್ರಭುಲಿಂಗ ನಾವಡಗಿ ಮಾಹಿತಿ ನೀಡಿದರು.

ಫೆಬ್ರವರಿ 15ರಂದೇ ಆರೋಪಿಗಳನ್ನು ಬಂಧಿಸಿದ್ದರೂ ಇವತ್ತಿನವರೆಗೂ ಜಾಮೀನು ಅರ್ಜಿ ಸಲ್ಲಿಸಿಲ್ಲ. ಹೀಗಾಗಿ ಆರೋಪಿಗಳ ವಕೀಲರಿಗೆ ಧಾರವಾಡ ಕೋರ್ಟ್‌ನಲ್ಲಿ ಪೊಲೀಸ್‌ ರಕ್ಷಣೆ ನೀಡುವಂತೆ ಈ ಹಿಂದೆ ನೀಡಿದ್ದ ಆದೇಶವನ್ನು ಮುಂದುವರಿಸಿ ಹೈಕೋರ್ಟ್‌ ಆದೇಶಿಸಿದೆ.

LEAVE A REPLY

Please enter your comment!
Please enter your name here