ಕೆಎಂಎಫ್​ನಲ್ಲಿ ಉದ್ಯೋಗಾವಕಾಶ; 487 ವಿವಿಧ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಕೆಎಂಎಫ್ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ, ಬೆಂಗಳೂರು ಇಲ್ಲಿ ಖಾಲಿ ಇರುವ 487 ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಹಾಕಲು ಇಚ್ಚಿಸುವ ಅಭ್ಯರ್ಥಿಗಳು ನ.​19ರ ಒಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ.

ಡೆಪ್ಯೂಟಿ ಡೈರೆಕ್ಟರ್, ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ಒಟ್ಟು 487 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯಲ್ಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ/ ಐಟಿಐ / ಡಿಪ್ಲೊಮ / ಡಿಗ್ರಿ ಪಾಸ್‌ ಮಾಡಿರಬೇಕು. ಉನ್ನತ ಮಟ್ಟದ ಹುದ್ದೆಗಳಿಗೆ ವಿದ್ಯಾರ್ಹತೆ ಜತೆಗೆ, ಕನಿಷ್ಠ ಕಾರ್ಯಾನುಭವಗಳನ್ನು ಹೊಂದಿರಬೇಕು.

ಆನ್‌ಲೈನ್‌ ಮೂಲಕ ಮಾತ್ರ ಅರ್ಜಿಯನ್ನು ಸಲ್ಲಿಸಲು ಅವಕಾಶವಿದ್ದು, ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿಯ ಅಧಿಕೃತ ವೆಬ್‌ಸೈಟ್‌ https://www.kmfnandini.coop/kn ಗೆ ಭೇಟಿ ನೀಡಿ ಅರ್ಜಿ ಸಲ್ಲಿಸ ಬಹುದು. ಅಭ್ಯರ್ಥಿಗಳು ಒಂದು ಹುದ್ದೆಗೆ ಒಂದೇ ಅರ್ಜಿ ಸಲ್ಲಿಸಬೇಕು. ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದಲ್ಲಿ, ಒಂದೇ ನೊಂದಣಿ ಸಂಖ್ಯೆಯಡಿಯಲ್ಲಿಯೇ ಅರ್ಜಿ ಸಲ್ಲಿಸಬೇಕು.

ಅರ್ಜಿ ಶುಲ್ಕ ವಿವರ
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.500.
ಇತರೆ ವರ್ಗದ ಅಭ್ಯರ್ಥಿಗಳು ಪಾವತಿಸಬೇಕಾದ ಶುಲ್ಕ ರೂ.1000.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 20-10-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 19-11-2022

 ಹೆಚ್ಚಿನ ಮಾಹಿತಿಗಾಗಿ https://recruitapp.in/kmf2022/uploads/files/notification/1maunw.pdf ನೋಟಿಫಿಕೇಶನ್‌ ಲಿಂಕ್ ಕ್ಲಿಕ್ ಮಾಡಿ ಓದಿರಿ.