ಕೆಎಸ್‌ಆರ್‌ಟಿಸಿ ಗೆ ಒಂದು ಕೋಟಿಯ ಚೆಕ್ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬೆಂಗಳೂರಿನಲ್ಲಿ ಇರುವ ಉತ್ತರ ಕರ್ನಾಟಕದ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ತಲುಪಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕೆಎಸ್‌ಆರ್‌ಟಿಸಿಗೆ ಒಂದು ಕೋಟಿ ರೂಪಾಯಿ ಚೆಕ್ ಕೊಟ್ಟಿದೆ.

ಕಟ್ಟಡ ಕಾರ್ಮಿಕರು, ಕೂಲಿ ಕಾರ್ಮಿಕರು ತಮ್ಮ ಸ್ವಂತ ಊರಿಗೆ ಮರಳಲು ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಂಪೇಗೌಡ ನಿಲ್ದಾಣಕ್ಕೆ ಶನಿವಾರ ಸಾವಿರಾರು ಪ್ರಯಾಣಿಕರು ಆಗಮಿಸಿದ್ದರು. ಆದರೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದೇ ಬೆಳಗ್ಗೆಯಿಂದ ಊಟ ತಿಂಡಿ ಇಲ್ಲದೇ ಇಲ್ಲದೇ ಪರದಾಡಿದ್ದರು.

ಈ ವಿಚಾರವಾಗಿ ನೂರಾರು ದೂರವಾಣಿ ಕರೆಗಳು ತಮಗೆ ಬಂದ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರು ಖುದ್ದು ಸ್ಥಳಕ್ಕೆ ಬಂದು ಪರಿಸ್ಥಿತಿ ವೀಕ್ಷಿಸಿದರು. ಬೆಳಗ್ಗೆಯಿಂದ ಊಟ ತಿಂಡಿ ಇಲ್ಲದೇ ಬಸ್‌ಗಾಗಿ ಕಾಯುತ್ತಿರುವ ಕಾರ್ಮಿಕರ ಪರದಾಟ ನೋಡಿ ಆಕ್ರೋಶ ವ್ಯಕ್ತಪಡಿಸಿದರು.

ಇದೀಗ ಪ್ರಯಾಣಿಕರನ್ನು ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ‌ ಉಚಿತವಾಗಿ ಕರೆದೊಯ್ಯಲು. ಕೆಪಿಸಿಸಿ ವತಿಯಿಂದ ಕೆಎಸ್‌ಆರ್‌ಟಿಸಿ ಗೆ ೧ ಕೋಟಿ ರೂ ದೇಣಿಗೆಯನ್ನು ನೀಡಿದ್ದಾರೆ. ಇನ್ನೂ ಹೆಚ್ಚಿನ ವೆಚ್ಚವಾದರೆ ಅದನ್ನು ಬರಿಸಲು ಕೆಪಿಸಿಸಿ ಸಿದ್ದವಿದೆ ಎಂದು ಕೆಎಸ್‌ಆರ್‌ಟಿಸಿ ಎಂಡಿಗೆ ಡಿ.ಕೆ.ಶಿವಕುಮಾರ್ ಪತ್ರ ಬರೆದಿದ್ದಾರೆ.

LEAVE A REPLY

Please enter your comment!
Please enter your name here