ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಕಾರ್ಮಿಕರನ್ನು ಹಳ್ಳಿ, ಕೆಲಸ ಸ್ಥಳಗಳಿಗೆ ಸ್ಥಳಾಂತರಿಸಿ – ತುರ್ತು ಕ್ರಮಕ್ಕೆ ಸರ್ಕಾರದ ಆದೇಶ

ರಾಜ್ಯದೊಳಗೆ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರು ಮತ್ತು ಕೂಲಿ ಕಾರ್ಮಿಕರು ತಮ್ಮ ಹಳ್ಳಿಗಳಿಗೆ ಹೋಗಲು ಅನುಮತಿ ನೀಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ಆದರೆ ಬೇರೆ ರಾಜ್ಯಗಳಿಗೆ ಹೋಗಲು ಅವಕಾಶವಿಲ್ಲ. ಕೇವಲ ರಾಜ್ಯದೊಳಗಷ್ಟೇ ಸಂಚಾರಕ್ಕೆ ಅಂದರೆ ಜಿಲ್ಲೆಗಳ ನಡುವೆ ಸಂಚಾರಕ್ಕೆ ಅವಕಾಶ ನೀಡಿ ಮುಖ್ಯ ಕಾರ್ಯದರ್ಶಿ ವಿಜಯ್‌ ಭಾಸ್ಕರ್‌ ಆದೇಶ ಹೊರಡಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಿಕ್ಕಿಹಾಕಿಕೊಂಡಿರುವ ವಲಸೆ ಕಾರ್ಮಿಕರು ಹಾಗೂ ಕೂಲಿ ಕಾರ್ಮಿಕರು ಕೃಷಿ ಕೆಲಸಕ್ಕಾಗಿ ತಮ್ಮ ಗ್ರಾಮಗಳಿಗೆ ಹಿಂದಿರುಗಲು ಅಥವಾ ನಿರ್ಮಾಣ ಮತ್ತು ಇತರೆ ಕೆಲಸಗಳಿಗಾಗಿ ನಗರಗಳಿಗೆ ಹೋಗಲು ಬಯಸುತ್ತಿದ್ದಾರೆ.

ಕೇಂದ್ರ ಗೃಹ ಸಚಿವಾಲಯದ ಆದೇಶದಂತೆ ಈ ವಲಸೆ ಕಾರ್ಮಿಕರು ಮತ್ತು ಕೂಲಿ ಕಾರ್ಮಿಕರನ್ನು ರಾಜ್ಯದೊಳಗೆ ಸ್ಥಳಾಂತರಿಸಲು ಅನುಮತಿ ನೀಡಲಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಸಾಮಾನ್ಯ ಕೃಷಿ ಮತ್ತು ಆರ್ಥಿಕ ಚಟುವಟಿಕೆಗಳು ಪುನಾರಂಭಗೊಳ್ಳುತ್ತದೆ.

ಆದರಿಂದ ಈ ಹಿಂದಿನ ಮಾರ್ಗಸೂಚಿಯಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಶೇಕಡಾ ೪೦ರಷ್ಟು ಕಾರ್ಮಿಕರನ್ನು ಸ್ಥಳಾಂತರಿಸಬಹುದಾಗಿದೆ.

ಸ್ಥಳಾಂತರಿಸುವ ಕಾರ್ಮಿಕರಿಗೆ ಮಾಸ್ಕ್‌ ಮತ್ತು ಗ್ಲೌಸ್‌ಗಳನ್ನು ನೀಡುವಂತೆಯೂ ಮತ್ತು ತಕ್ಷಣವೇ ಕಾರ್ಮಿಕರ ಸ್ಥಳಾಂತರಕ್ಕೆ ಕ್ರಮಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸರ್ಕಾರ ಸೂಚಿಸಿದೆ.

ಇದನ್ನೂ ಓದಿ.

ಕೆಲಸದ ಸ್ಥಳಗಳಿಗೆ ಕಾರ್ಮಿಕರನ್ನು ಬಸ್‌ನಲ್ಲಿ ಕರೆದೊಯ್ಯಬಹುದು – ಕೇಂದ್ರ ಸರ್ಕಾರದ ಆದೇಶ

LEAVE A REPLY

Please enter your comment!
Please enter your name here