ಕೆಪಿಸಿಸಿ ಅಧ್ಯಕ್ಷರಾಗಿ ಮೇ 31ಕ್ಕೆ ಡಿಕೆಶಿ ಅಧಿಕಾರ ಸ್ವೀಕಾರ

ಲಾಕ್ ಡೌನ್ ನಾಲ್ಕನೆ ಹಂತದ ಸಡಿಲಿಕೆಯ ಸುಳಿವು ಸಿಗುತ್ತಿದ್ದಂತೆಯೇ ಪಕ್ಷದ ಬಲವರ್ಧನೆಗೆ ಪ್ರದೇಶ ಕಾಂಗ್ರೆಸ್ ಸಮಿತಿ ಸಿದ್ಧತೆ ನಡೆಸಲು ಆರಂಭಿಸಿದ್ದು ಇದಕ್ಕೆ ಪೂರ್ವಭಾವಿಯಾಗಿ ಪಕ್ಷದ ಎಲ್ಲಾ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಪುನರ್ ಸಂಘಟಿಸುವ ನಿಟ್ಟಿನಲ್ಲಿ ಅಭಿಪ್ರಾಯ ಪಡೆದು ಮುಂದಿನ ಹೆಜ್ಜೆ ಇಡಲು ಡಿ ಕೆ ಶಿವಕುಮಾರ್ ನಿರ್ಧರಿಸಿದ್ದಾರೆ.

ಈ ಮೂಲಕ ಡಿಕೆ ಶಿವಕುಮಾರ್‌ ಅವರು ಮೇ 31 ರಂದು ಕೆಪಿಸಿಸಿ ಕಛೇರಿಯಲ್ಲಿ ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರಿಗೆ ಆಯಾ ತಾಲೂಕು, ಜಿಲ್ಲೆಯ ಕಾಂಗ್ರೆಸ್‌ ಕಛೇರಿಗಳಲ್ಲಿ  ಡಿಕೆಶಿ ಪದಗ್ರಹಣ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸುವ ಅವಕಾಶವನ್ನು ಕಲ್ಪಿಸಲಾಗಿದೆ.

ಈ ಹಿಂದೆ ನಡೆದ 15 ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದ ಬಳಿಕ ದಿನೇಶ್ ಗುಂಡೂರಾವ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಶಿವಕುಮಾರ್ ನೇಮಕಗೊಳಿಸಿರುವ ಹೈಕಮಾಂಡ್, ದಿನೇಶ್ ಗುಂಡೂರಾವ್ ರಾಜೀನಾಮೆ ಅಂಗೀಕರಿಸಿದ್ದರು.

LEAVE A REPLY

Please enter your comment!
Please enter your name here