ಕೊರೋನಾ ಸೋಂಕಿತ ಆತ್ಮಹತ್ಯೆ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಐಸೋಲೇಷನ್ ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೋನಾ ಸೋಂಕಿತರೊಬ್ಬರು ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ.

ಬೆಂಗಳೂರಿನ ತಿಲಕ್ ನಗರದ ನಗರದ ನಿವಾಸಿ 50 ವರ್ಷದ ಪೇಶೆಂಟ್-466 ಸೈಯ್ಯದ್ ಬಾಬು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಸೈಯ್ಯದ್ ಬಾಬು ಕಳೆದ 10 ವರ್ಷಗಳ ಹಿಂದೆ ಕಿಡ್ನಿ ವೈಫಲ್ಯಕ್ಕೆ ತುತ್ತಾಗಿದ್ದರು. ನಿರಂತರವಾಗಿ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದ ಸೈಯ್ಯದ್ ಬಾಬುಗೆ ಏಪ್ರಿಲ್ 24ರಂದು ಕೊರೋನಾ ಸೋಂಕು ತಗುಲಿದ್ದು ದೃಢಪಟ್ಟಿತ್ತು. ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಐಸೋಲೇಷನ್ ವಾರ್ಡ್‍ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ನಿತ್ಯವೂ ಹತ್ತಾರು ಜನರ ಜೊತೆ ಸಂಪರ್ಕ ಹೊಂದಿರುವ ವ್ಯಕ್ತಿಯನ್ನು ಕೊಠಡಿಯೊಂದರಲ್ಲಿ ಒಬ್ಬಂಟಿಯಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತದೆ. ಇದರಿಂದ ಖಿನ್ನತೆಗೆ ಒಳಗಾಗಿ ಈ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರಬಹುದು ಎನ್ನಲಾಗಿದೆ.

LEAVE A REPLY

Please enter your comment!
Please enter your name here