ಕ್ವಾರಂಟೈನ್‌ ಅವಧಿಯನ್ನು 7 ದಿನಗಳಿಗೆ ಇಳಿಸಿದ ರಾಜ್ಯ ಸರ್ಕಾರ

ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಈ ನಡುವೆ ಹೊರರಾಜ್ಯಗಳಿಂದ ಆಗಮಿಸುತ್ತಿರುವ ಜನರಿಗೆ 14 ದಿನಗಳಿದ್ದ ಕ್ವಾರಂಟೈನ್ ಅವಧಿಯನ್ನು ಒಂದು ವಾರಕ್ಕೆ ಇಳಿಸಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ.

ಸರ್ಕಾರದ ಪರಿಷ್ಕೃತ ಮಾರ್ಗಸೂಚಿಗಳ ಪ್ರಕಾರ ಅತಿ ಹೆಚ್ಚು ಪ್ರಕರಣಗಳು ಇರುವ ರಾಜ್ಯಗಳಾದ ಮಹಾರಾಷ್ಟ್ರ,ತಮಿಳುನಾಡು, ಗುಜರಾತ್, ದಿಲ್ಲಿ,‌ರಾಜಸ್ಥಾನದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರು ರಾಜ್ಯಕ್ಕೆ ಆಗಮಿಸಲು “ಸೇವಾ ಸಿಂಧು” ಯೋಜನೆಯಡಿ ಹೆಸರು ನೋಂದಣಿ ಮಾಡಬೇಕು.

ಮೇಲ್ಕಂಡ ರಾಜ್ಯಗಳನ್ನು ಹೊರತುಪಡಿಸಿ ಇತರ ರಾಜ್ಯಗಳಿಂದ ಆಗಮಿಸುವವರಿಗೆ ಹೋಂ ಕ್ವಾರಂಟೈನ್‌ ನಲ್ಲಿ ಇರಿಸಲಾಗುವುದು.

ಪಾಸ್ ಪಡೆದಿರುವವರು ಆರೋಗ್ಯ ಇಲಾಖೆ ನಿಗದಿಪಡಿಸಿರುವ ಹೋಟೆಲ್ ಅಥವಾ ಸಮುದಾಯ ಭವನಗಳಲ್ಲಿ ಕಡ್ಡಾಯವಾಗಿ ಒಂದು ವಾರ ಕ್ವಾರಂಟೈನ್ನಲ್ಲಿರಬೇಕು.ಈ ಅವಧಿಯಲ್ಲಿ ಗಂಟಲು ದ್ರವ ಸಂಗ್ರಹಿಸಿ ಕೊರೊನಾ ಸೋಂಕು ಪರೀಕ್ಷೆ ನಡೆಸಲಾಗುತ್ತದೆ.

ಕೋವಿಡ್ ಪಾಸಿಟಿವ್ ಬಂದು ಆಸ್ಪತ್ರೆಗೆ ದಾಖಲಾದ ರೋಗಿ 10 ದಿನವಾದರೂ ರೋಗ ಲಕ್ಷಣ ಕಾಣಿಸದಿದ್ದರೆ ಮಾತ್ರ ಈ ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇದೆ. ಒಂದು ವೇಳೆ ರೋಗಿಗೆ ಮನೆಯಲ್ಲಿ ಕ್ವಾರಂಟೈನ್ ಆಗಲು ಸೂಕ್ತ ಸೌಲಭ್ಯ ಇಲ್ಲದಿದ್ದರೆ ಅಂಥವರಿಗೆ ಸರ್ಕಾರವೇ ಬದಲಿ ವ್ಯವಸ್ಥೆ ಮಾಡಲಿದೆ.

LEAVE A REPLY

Please enter your comment!
Please enter your name here