ಕ್ವಾರಂಟೈನ್‌ ಕೇಂದ್ರದಲ್ಲೇ ಬರ್ತ್‌ಡೇ ಪಾರ್ಟಿ…!

ಲಾಕ್‌ಡೌನ್‌ ನಡುವೆಯೂ ಕ್ವಾರಂಟೈನ್‌ ಕೇಂದ್ರದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ನಡೆದಿದೆ.

ಸಾಣೂರು ಪ್ರಕೃತಿ ಆಂಗ್ಲಮಾದ್ಯಮ ಶಾಲೆಯಲ್ಲಿ ನಡೆಯುತ್ತಿರುವ ಕ್ವಾರಂಟೈನ್ ಕೇಂದ್ರದಲ್ಲಿ ಕಾರ್ಕಳ ಬಿಜೆಪಿ ಯುವ ಮೋರ್ಚಾ ಅದ್ಯಕ್ಷ ಕರುಣಾಕರ ಕೋಟ್ಯಾನ್, ಕಾಂತಾವರ ಪಂಚಾಯತ್ ಅಧ್ಯಕ್ಷ ರಾಜೇಶ್ ಕೋಟ್ಯಾನ್, ಯುವ ಮೋರ್ಚಾ ಕಾರ್ಯದರ್ಶಿ ನವೀನ್ ಕಾಂತಾವರ ಕ್ವಾರಂಟೈನ್‌ನಲ್ಲಿರುವ ಮುಂಬಯಿಗರ ಜೊತೆಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಬಿಜೆಪಿ ಯುವ ಮೋರ್ಚಾ ಅದ್ಯಕ್ಷ ಹಾಗೂ ಕಾಂತಾವರ ಪಂಚಾಯತ್ ಅಧ್ಯಕ್ಷರ ಸಮ್ಮುಖದಲ್ಲಿ ಬೆಂಬಲಿಗರಿಂದ ರಾತ್ರಿ ಇಡೀ ಮೋಜು ಮಸ್ತಿ ನಡೆದಿದ್ದು, ಕ್ವಾರಂಟೈನ್‌ ಕೇಂದ್ರದಲ್ಲೇ ಹುಟ್ಟುಹಬ್ಬ ಆಚರಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

LEAVE A REPLY

Please enter your comment!
Please enter your name here