ಗಮನಿಸಿ.. ಗಮನಿಸಿ.. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯದ ಜನತೆ ಇದನ್ನು ಗಮನಿಸಲೇಬೇಕು.. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮುಂದೂಡಿಕೆಯಾಗಿದೆ. ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 27ರಿಂದ ಆರಂಭವಾಗವೇಕಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಎಸ್‍ಎಸ್‍ಎಲ್‍ಸಿ ಸೇರಿದಂತೆ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಆದರೆ, ದ್ವಿತೀಯ ಪಿಯುಸಿಯ ಉಳಿದ ಪರೀಕ್ಷೆಗಳ ಬಗ್ಗೆ ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ.

LEAVE A REPLY

Please enter your comment!
Please enter your name here