ಉಡುಪಿ: ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಜೂ.14ರ ಬೆಳಗ್ಗೆ 6ರವರೆಗೆ ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ ಸೆಕ್ಷನ್ 144(3)ನ್ನು ವಿಧಿಸಿದ್ದು, ಮದುವೆ ಸೇರಿದಂತೆ ಇನ್ನಿತರೆ ಸಭೆ ಸಮಾರಂಭಗಳನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿದ್ದಾರೆ.
ಶವಸಂಸ್ಕಾರಕ್ಕೆ ಗರಿಷ್ಠ 5 ಜನರಿಗೆ ಭಾಗವಹಿಸಲು ಅವಕಾಶ ನೀಡಲಾಗಿದ್ದು, ರಫ್ತುಗಳಲ್ಲಿ ನೇರವಾಗಿ ತೊಡಗಿಸಿಕೊಂಡಿರುವ ಎಲ್ಲ ಘಟಕಗಳು, ಸಂಸ್ಥೆಗಳು ಶೇ.30ರಷ್ಟು ಸಿಬಂದಿಗಳನ್ನೊಳಗೊಂಡು ನಿಯಾವಳಿಯೊಂದಿಗೆ ಕರ್ತವ್ಯ ನಿರ್ವಹಿಸಲು ಅನುಮತಿಸಿದೆ.
1,000ಕ್ಕಿಂತ ಹೆಚ್ಚಿ ಸಿಬಂದಿಗಳಿರುವ ಸಂಸ್ಥೆ ಶೇ.10ರಷ್ಟು ಸಿಬಂದಿಗಳನ್ನು ಬಳಸಿಕೊಂಡು ಕೆಲಸ ಮಾಡ ಬಹುದಾಗಿದೆ ಎಂದು ಹೇಳಿದ್ದಾರೆ.
ಮೇಲಿನ ಆದೇಶ ಪಾಲಿಸದವರ ವಿರುದ್ಧ ಕ್ರಿಮಿನಲ್ ಪ್ರಕರಣ ವಿಧಿಸಿ, ಕಠಿನ ಕ್ರಮಕೈಗೊಳ್ಳಲಾಗುತ್ತದೆ. ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.