ಜೂನ್‌ 1ರಿಂದ ಧರ್ಮಸ್ಥಳದಲ್ಲಿ ಮಂಜುನಾಥನ ದೇವಸ್ಥಾನ ಓಪನ್‌ – ಭಕ್ತರಿಗೆ ದರ್ಶನಕ್ಕೆ ಅವಕಾಶ

ಜೂನ್‌ 1ರಿಂದ ರಾಜ್ಯದಲ್ಲಿ ಎಲ್ಲಾ ದೇವಸ್ಥಾನಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಜೂನ್‌ 1ರಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲೂ ಭಕ್ತರಿಗೆ ಮಂಜುನಾಥನ ದರ್ಶನ ಭಾಗ್ಯ ಸಿಗಲಿದೆ.

ಮುಜರಾಯಿ ಇಲಾಖೆ ಮಾರ್ಗಸೂಚಿಯಂತೆ ಧರ್ಮಸ್ಥಳದಲ್ಲೂ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಸಾಮಾಜಿಕ ಅಂತರ, ಮಾಸ್ಕ್‌ ಕಡ್ಡಾಯದ ಜೊತೆಗೆ ಬರುವ ಭಕ್ತರಿಗೆ ಆರೋಗ್ಯ ತಪಾಸಣೆಯನ್ನೂ ಧರ್ಮಸ್ಥಳದಲ್ಲಿ ನಡೆಸಲಾಗುತ್ತದೆ.

ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಭಕ್ತರಿಗೆ ದರ್ಶನ ವ್ಯವಸ್ಥೆ ಮಾಡುವುದಕ್ಕೆ ಧರ್ಮಸ್ಥಳದಲ್ಲಿ ಸಿದ್ಧತೆ ನಡೆದಿದೆ.‌

LEAVE A REPLY

Please enter your comment!
Please enter your name here