ಟ್ರಾಕ್ಟರ್​ ಚಳುವಳಿಗೆ ಕರೆ ಕೊಟ್ಟ ಕೊಟ್ಟ ರೈತ ನಾಯಕ ಟಿಕಾಯತ್​ ವಿರುದ್ಧ FIRಗೆ ಸಿದ್ದರಾಮಯ್ಯ ಖಂಡನೆ

ಟ್ರಾಕ್ಟರ್​ಗಳ ಮೂಲಕ ದೆಹಲಿಗೆ ರೈತರು ಮುತ್ತಿಗೆ ಹಾಕಿದಂತೆ ಕರ್ನಾಟಕದಲ್ಲೂ ರೈತರು ಬೆಂಗಳೂರಿಗೆ ಮುತ್ತಿಗೆ ಹಾಕಬೇಕು ಎಂದು ರೈತ ನಾಯಕ ರಾಕೇಶ್​ ಟಿಕಾಯತ್​ ಶಿವಮೊಗ್ಗದಲ್ಲಿ ನೀಡಿದ್ದ ಹೇಳಿಕೆಯನ್ನು ಪ್ರಚೋದನಕಾರಿ ಎಂದು ಪರಿಗಣಿಸಿ ಶಿವಮೊಗ್ಗ ಮತ್ತು ಹಾವೇರಿ ಪೊಲೀಸರು ಎಫ್​ಐಆರ್​ ದಾಖಲಿಸಿರುವುದನ್ನು ಮಾಜಿ ಸಿಎಂ ಸಿದ್ದರಾಮಯ್ಯ ಕಟುವಾಗಿ ಖಂಡಿಸಿದ್ದಾರೆ.

ರಾಕೇಶ್​ ಟಿಕಾಯತ್​ ವಿರುದ್ಧ ಎಫ್​ಐಆರ್​ ದಾಖಲಿಸುವ ಮೂಲಕ ಬಿಜೆಪಿಯ ಅಸಲಿ ಮುಖ ಬಯಲಾಗಿದೆ. ಪೊಲೀಸ್ ಬಲಪ್ರಯೋಗದಿಂದ ರೈತಶಕ್ತಿಯನ್ನು ಹಣಿಯಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಭ್ರಮೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರೈತನಾಯಕ ರಾಕೇಶ್ ಟಿಕಾಯತ್ ಅವರ ವಿರುದ್ಧ ಶಿವಮೊಗ್ಗ ಮತ್ತು ಹಾವೇರಿ ಪೊಲೀಸರು ಪ್ರಕರಣ ದಾಖಲಿಸಿರುವುದು ಖಂಡನೀಯ. ತಾನೊಬ್ಬ ರೈತನಾಯಕನೆಂದು ಬಿಂಬಿಸುತ್ತಾ ಮುಖ್ಯಮಂತ್ರಿ ಪಟ್ಟಕ್ಕೇರಿರುವ ಬಿ.ಎಸ್ ಯಡಿಯೂರಪ್ಪ ಅವರ ಅಸಲಿ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ತಕ್ಷಣ ಈ ಪ್ರಕರಣವನ್ನು ಹಿಂದೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇನೆ.
ರೈತವಿರೋಧಿ ಬಿಜೆಪಿಗೆ ಕರಾಳ ಕೃಷಿಕಾಯ್ದೆಯನ್ನು ವಿರೋಧಿಸುವವರು ಅಪರಾಧಿಗಳಂತೆ ಕಾಣುವುದು ಸಹಜವೇ ಆಗಿದೆ. ಆದರೆ ದೇಶದ ಜನತೆಗೆ ನಿಜವಾದ ಅಪರಾಧಿಗಳು ಯಾರೆಂದು ಗೊತ್ತಾಗಿದೆ. ಪೊಲೀಸ್ ಬಲಪ್ರಯೋಗದಿಂದ ರೈತಶಕ್ತಿಯನ್ನು ಹಣಿಯಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಭ್ರಮೆ

ಎಂದು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

LEAVE A REPLY

Please enter your comment!
Please enter your name here