ಜೂನ್ 14 ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಪದಗ್ರಹಣ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಪೂರ್ವ ತಯಾರಿ ಸಭೆ ನಡೆಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳ ಜೊತೆಗೆ ಡಿಕೆ ಶಿವಕುಮಾರ್ ವಿಡಿಯೋ ಸಂವಾದ ನಡೆಸಿದರು.
ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮತ್ತು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೇತ್ರತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ವೀಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು.
ಈ ವೀಡಿಯೋ ಸಂವಾದದಲ್ಲಿ ಲಾಕ್ಡೌನ್ ನಿಯಮಾವಳಿಗಳನ್ನು ಉಲ್ಲಂಘನೆ ಮಾಡದಂತೆ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಕಾರ್ಯಕ್ರಮಕ್ಕೆ ಸ್ಥಳೀಯಾಡಳಿತದಿಂದ ಅನುಮತಿ ಪಡೆಯುವ ನಿಟ್ಟಿನಲ್ಲಿ ಚರ್ಚೆ ನಡೆಸಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಸಾಮಾಜಿಕ ಜಾಲತಾಣ ಅಧ್ಯಕ್ಷ ನಿತ್ಯಾನಂದ ಶೆಟ್ಟಿ , ಶೆರೀಲಿಯೊನ್ ,ಸಂತೋಷ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಜೂನ್ 14 ರಂದು ಡಿಕೆಶಿ ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಲಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು ಸೀಮಿತ ಸಂಖ್ಯೆಯ ಜನರನ್ನು ಮಾತ್ರ ಸೇರಿಸಲು ನಿರ್ಧರಿಸಲಾಗಿದೆ.