ತೈಲ ಬೆಲೆ ಏರಿಕೆ: ಕಾಂಗ್ರೆಸ್‌ ಕಾರ್ಯಕರ್ತರಿಂದ ಪ್ರತಿಭಟನೆ

ಕೇಂದ್ರ ಸರಕಾರ ಪೆಟ್ರೋಲ್‌-ಡೀಸೆಲ್‌ ಬೆಲೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಬೆಂಗಳೂರು ನಗರದಲ್ಲಿ 2 ಕಡೆ ಪ್ರತ್ಯೇಕವಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

ಬೆಂಗಳೂರಿನ ಮೌರ್ಯ ಸರ್ಕಲ್‌ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕಚ್ಛಾ ತೈಲ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಡಿಮೆ ಆದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ಯುವ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸೇರಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ ಭವನ : ಅವೈಜ್ಞಾನಿಕ ರೀತಿಯಲ್ಲಿ ಏಕಾಏಕಿ ಮದ್ಯ ಮಾರಾಟಕ್ಕೆ ಅವಕಾಶ ಕೊಟ್ಟು ಹಾಗೂ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಇದ್ದರೂ ಅಬಕಾರಿ ಸುಂಕವನ್ನೇರಿಸಿದ್ದರ ವಿರುದ್ಧ ರಾಜ್ಯ ಮಹಿಳಾ ಕಾಂಗ್ರೆಸ್‌ ವತಿಯಿಂದ ಡಾ.ಪುಷ್ಪಾ ಅಮರ್‌ನಾಥ್‌ ನೇತೃತ್ವದಲ್ಲಿ ಇಂದು ಬೆಂಗಳೂರಿನ ಕಾಂಗ್ರೆಸ್‌ ಭವನದ ಮುಂದೆ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಜಯನಗರ ಕ್ಷೇತ್ರದ ಶಾಸಕಿ ಸೌಮ್ಯಾ ರೆಡ್ಡಿ, ಡಾ. ಜಯಮಾಲ, ರಾಣಿ ಸತೀಶ್‌ ಹಾಗೂ ಇತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here