ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮುಂದುವರೆದಿದ್ದು , ಜುಲೈ 11ರಂದು ದಕ್ಷಿಣ ಕನ್ನಡದಲ್ಲಿ ಮಳೆ ಪ್ರಯುಕ್ತ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆಯ ಮಾಹಿತಿಯಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ ವಿ ರಾಜೇಂದ್ರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಈ ಭಾಗದಲ್ಲಿ ಕಳೆದ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಈ ಕಾರಣದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ ಪ್ರಾಥಮಿಕ ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.