ದಯವಿಟ್ಟು ನನ್ನ ಹಣವನ್ನು ಬೇಷರತ್ತಾಗಿ ತೆಗೆದುಕೊಂಡು ನನ್ನ ವಿರುದ್ಧದ ಪ್ರಕರಣಗಳನ್ನು ಮುಚ್ಚಿಬಿಡಿ-ಮದ್ಯದ ದೊರೆ ವಿಜಯ್‌ ಮಲ್ಯ

ಭಾರತದ ಬ್ಯಾಂಕ್​ಗಳಿಗೆ ಸಾವಿರಾರು ಕೋಟಿ ರೂ. ಮೋಸ ಮಾಡಿ ದೇಶ ಬಿಟ್ಟು ಪರಾರಿಯಾಗಿದ್ದ ಆರ್ಥಿಕ ಅಪರಾಧಿ, ಮದ್ಯದ ದೊರೆ ವಿಜಯ್ ಮಲ್ಯ ತಾವು ಪಡೆದ ಸಾಲವನ್ನು ಸಂಪೂರ್ಣವಾಗಿ ಮರುಪಾವತಿ ಮಾಡಲು ಸಿದ್ಧವಿರುವುದಾಗಿ ಇತ್ತೀಚೆಗಷ್ಟೇ ತಿಳಿಸಿದ್ದರು.

ಇದೀಗ ಸಾಂಕ್ರಾಮಿಕ ರೋಗ ಕೊರೋನಾವೈರಸ್ ಸಂಕಷ್ಟದ ನಡುವೆ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಕ್ಕಾಗಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೊಡ್ಡಮೊತ್ತದ ಆರ್ಥಿಕ ಪ್ಯಾಕೇಜ್ ಘೋಷಿಸಿರುವುದಕ್ಕೆ ಉದ್ಯಮಿ ವಿಜಯ್ ಮಲ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಆರ್ಥಿಕ ಪ್ಯಾಕೇಜ್ ಘೋಷಿಸಿರುವ ಕೇಂದ್ರ ಸರ್ಕಾರವನ್ನು ಅಭಿನಂದಿಸುತ್ತೇನೆ.

ಅವರಿಗೆ ಎಷ್ಟು ಬೇಕು ಅಷ್ಟು ಹಣವನ್ನು ಮುದ್ರಿಸಬಹುದು ಆದರೆ ಸ್ಟೇಟ್ ಬ್ಯಾಂಕ್ ನಿಂದ ಪಡೆದ ಸಾಲವನ್ನು ಹಿಂದಿರುಗಿಸಲು ಬಯಸುವ ನನ್ನಂತಹ ಸಣ್ಣ ಕೊಡುಗೆಗಳನ್ನು ನಿರ್ಲಕ್ಷಿಸಬೇಕೇ? ನನಗೆ ಸಾಲವಾಗಿ ನೀಡಿರುವ ಹಣವನ್ನು ಯಾವುದೇ ಷರತ್ತು ವಿಧಿಸದೇ ವಾಪಸ್ ಪಡೆದು ಪ್ರಕರಣಕ್ಕೆ ಅಂತ್ಯ ಹಾಡುವಂತೆ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here