ADVERTISEMENT
ರಾಜ್ಯದ ಮೂರು ಕಡೆಗಳಲ್ಲಿ ಏರ್ಸ್ಟ್ರಿಪ್ ಸ್ಥಾಪನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಧರ್ಮಸ್ಥಳ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಹೊಸ ಏರ್‌ಸ್ಟ್ರಿಪ್‌ಗಳನ್ನು (Airstrip) ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.
ಪ್ರವಾಸೋದ್ಯಮ ಮತ್ತು ಉದ್ಯಮ ವಲಯಗಳನ್ನು ಉತ್ತೇಜಿಸಲು ಹಾಗೂ ವಿಪತ್ತು ನಿರ್ವಹಣೆಯ ಸಮಯದಲ್ಲಿ ರಕ್ಷಣಾ ಕಾರ್ಯಗಳಿಗೆ ನೆರವಾಗುವ ಉದ್ದೇಶದಿಂದ ಧರ್ಮಸ್ಥಳ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಹೊಸ ಏರ್‌ಸ್ಟ್ರಿಪ್‌ಗಳನ್ನು (Airstrip) ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದು.
ವಿಜಯಪುರ ವಿಮಾನ ನಿಲ್ದಾಣದ ಸಿವಿಲ್ ಕಾಮಗಾರಿಗಳನ್ನು ಪೂರ್ಣಗೊಳಿಸಿ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಪ್ರಸಕ್ತ ಸಾಲಿನಲ್ಲಿಯೇ ಪ್ರಾರಂಭಿಸಲಾಗುವುದು.
ADVERTISEMENT