ನಕಲಿ ದಾಖಲಾತಿ ಸೃಷ್ಟಿಸಿ ವಂಚಿಸುತ್ತಿದ್ದ ಆರೋಪಿಗಳನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಪಿಎಸ್ಐ ನಿತ್ಯಾನಂದಚಾರಿ ನೀಡಿದ ದೂರಿನ ಅನ್ವಯ ಯುವರಾಜ್ ಅಲಿಯಾಸ್ ಅಪ್ಪು ಸೇರಿ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳು ನಕಲಿ ಪಾಣಿ ಮಾಡಿ ಬೇರೆಯವರ ನಿವೇಶನಗಳನ್ನ ತಮ್ಮ ಹೆಸರಿಗೆ ಮಾಡಿಕೊಳ್ಳುತ್ತಿದ್ದರು.
ಇವರ ವಿರುದ್ಧ ಯಶವಂತರ ಪೊಲೀಸ್ ಠಾಣೆಯಲ್ಲಿಯೂ ಸಹ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿಗಳನ್ನ ಬಂಧಿಸಿರುವ ಪೊಲೀಸರು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.