ನ್ಯಾಯಾಧೀಶರನ್ನು ವಿರುದ್ದ ಆಕ್ಷೇಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದ ಆರೋಪದಡಿ ನಟ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ನಿನ್ನೆ(ಫೆ.22) ವಶಕ್ಕೆ ಪಡೆದಿದ್ದರು. ಇದೀಗ ನಟ ಚೇತನ್ಗೆ 8ನೇ ಎಸಿಎಂಎಂ ನ್ಯಾಯಲಯ 14 ದಿನ ನ್ಯಾಯಾಂಗ ಬಂಧನ ನೀಡಿ ಆದೇಶ ಹೊರಡಿಸಿದೆ. ಹಾಗಾಗಿ ಚೇತನ್ ಸದ್ಯ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.
ನಟ ಚೇತನ್ ಅವರ ಬಂಧನವನ್ನು ವಿರೋಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಮುನ್ಸೂಚನೆಯನ್ನೂ ನೀಡದೇ, ಪತ್ನಿಗೂ ಮಾಹಿತಿ ನೀಡದೇ ಚೇತನ್ ಅವರನ್ನು ಬಂಧಿಸಿರುವ ಬಗ್ಗೆ ಆಕ್ಷೇಪಗಳು ವ್ಯಕ್ತವಾಗುತ್ತಿವೆ.
ಈ ಬೆನ್ನಲ್ಲೇ, ಸ್ಯಾಂಡಲ್ವುಡ್ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು ನಟ ಚೇತನ್ ಪರವಾಗಿ ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಚೇತನ್ ಬಂಧನಕ್ಕೆ ಕಾರಣ ಆಗಿರುವ ಟ್ವೀಟ್ಗಳನ್ನು ಪೋಸ್ಟ್ ಮಾಡಿ, “ಪೊಲೀಸರು ಚೇತನ್ ಅವರನ್ನು ಬಂಧಿಸುವಂತಹ ದೋಷ ಈ ಟ್ವೀಟ್ನಲ್ಲಿ ಏನಿದೆ?.” ಎಂದು ಟ್ವೀಟ್ ಮಾಡುವ ಮೂಲಕ ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ಅವರು ಚೇತನ್ ಅವರ ಟ್ವೀಟ್ನಲ್ಲಿ ತಪ್ಪಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಅಲ್ಲದೇ ಪೊಲೀಸರ ಕ್ರಮವನ್ನು ಖಂಡಿಸಿದ್ದಾರೆ.
What is wrong with this tweet for the police to arrest Chetan? @ChetanAhimsa https://t.co/tSeRIBpgMi
— Ramya/Divya Spandana (@divyaspandana) February 23, 2022