ನಾಳೆಯಿಂದ ರಾಜ್ಯಾದ್ಯಂತ ಬಸ್‌ ಓಡಾಟ – ಸರ್ಕಾರಿ ಸಾರಿಗೆ ಸಿಬ್ಬಂದಿಗೆ 30 ಲಕ್ಷ ರೂ. ಜೀವವಿಮೆ – ಸಾರಿಗೆ ಸಚಿವ ಸವದಿ ಆದೇಶ

ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಗಳಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ರಾಜ್ಯ ಸರ್ಕಾರ ಕೊರೋನಾ ವಾರಿಯರ್ಸ್‌ ವ್ಯಾಪ್ತಿಗೆ ತಂದಿದ್ದು, ಅವರಿಗೂ 30 ಲಕ್ಷ ರೂಪಾಯಿಗಳ ಜೀವವಿಮೆ ಘೋಷಿಸಿದೆ.

ನಾಳೆಯಿಂದ ರಾಜ್ಯಾದ್ಯಂತ ಬಸ್‌ಗಳ ಓಡಾಟ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ತೀರ್ಮಾನ ಕೈಗೊಂಡಿದೆ.

ಒಂದು ವೇಳೆ ಕರ್ತವ್ಯದ ವೇಳೆ ಕೊರೋನಾ ಸೋಂಕಿಗೆ ಬಲಿ ಆದರೆ ಆಗ ಸರ್ಕಾರಿ ಸಾರಿಗೆ ಸಂಸ್ಥೆಯ ನೌಕರರ ಕುಟುಂಬಕ್ಕೆ 30 ಲಕ್ಷ ರೂಪಾಯಿಗಳ ಪರಿಹಾರ ಹಣವನ್ನು ಸಾರಿಗೆ ಇಲಾಖೆಯಿಂದ ನೀಡಲಾಗುತ್ತದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ನಾಳೆಯಿಂದ ಚಾಲಕ ಮತ್ತು ನಿರ್ವಾಹಕರಿಗೆ ಸ್ಯಾನಿಟೈಸರ್‌ ಮತ್ತು ಮಾಸ್ಕ್‌ಗಳನ್ನು ಸರ್ಕಾರ ವಿತರಿಸಲಿದೆ. ಪ್ರಯಾಣಿಕರು ಮಾಸ್ಕ್‌ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ.

LEAVE A REPLY

Please enter your comment!
Please enter your name here