ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ, ಮಂಗಳೂರು ಇವರ ಸಂಯುಕ್ತಾಶ್ರದಲ್ಲಿ ಕರ್ನಾಟಕ ಸರ್ಕಾರಿ ನೌಕರರ ದಿನಾಚರಣೆಯ ಪ್ರಯುಕ್ತ 2021ನೇ ಹಾಗೂ 2022ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ ವಿತರಣಾ ಸಮಾರಂಭವನ್ನು ಏಪ್ರಿಲ್ 21ರ ಗುರುವಾರ ಬೆಳಿಗ್ಗೆ 11 ಗಂಟೆಗೆ ಮಂಗಳೂರಿನ ಟೌನ್ ಹಾಲ್ನಲ್ಲಿ ನಡೆಯಲಿದೆ.
ಸಚಿವ ವಿ. ಸುನೀಲ್ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಂಗಳೂರು ನಗರದ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್, ವಹಿಸಿಕೊಳ್ಳಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನ ಪ್ರತಿನಿಧಿಗಳು, ಸರ್ಕಾರಿ ನೌಕರರು, ಸರ್ವೋತ್ತಮ ಪ್ರಶಸ್ತಿ ಪುರಸ್ಕೃತರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ 2019 ಹಾಗೂ 2020ರ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಸರ್ಕಾರಿ ದಿನಾಚರಣೆಯಲ್ಲಿ ಭಾಗವಹಿಸುವ ಎಲ್ಲಾ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜಾ ಸೌಲಭ್ಯವಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.