ಪತ್ರಕರ್ತ ಅರ್ನಬ್ ಗೋಸ್ವಾಮಿ ವಿಚಾರಣೆ

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಆಧಾರ ರಹಿತ ಆರೋಪ ಮಾಡಿದ ಆರೋಪ ಎದುರಿಸುತ್ತಿರುವ ರಿಪಬ್ಲಿಕ್ ಟಿವಿಯ ಎಡಿಟರ್ ಇನ್ ಚೀಫ್ ಅರ್ನಬ್ ಗೋಸ್ವಾಮಿ ಮುಂಬೈನ ಎನ್.ಎಂ.ಜೋಷಿ ಮಾರ್ಗ್‍ನಲ್ಲಿರುವ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಎದುರಿಸಿದ್ದಾರೆ.

ಪತ್ರಕರ್ತ ಅರ್ನಬ್ ಗೋಸ್ವಾಮಿಗೆ ಅವರ ಪರ ವಕೀಲ ಸುಜಯ್ ಕಂಟಾವಾಲ ಸಾಥ್ ನೀಡಿದ್ದಾರೆ. ವಿಚಾರಣೆಗೆ ಮುನ್ನ ಮಾತನಾಡಿದ ಅರ್ನಬ್ ಗೋಸ್ವಾಮಿ, ಸತ್ಯಕ್ಕೆ ಜಯ ಆಗುತ್ತದೆ. ನಾನು ಮುಚ್ಚಿಡುವಂತದ್ದು ಏನು ಇಲ್ಲ ಎಂದು ತಿಳಿಸಿದ್ದಾರೆ.

ಸೋನಿಯಾ ಗಾಂಧಿ ವಿರುದ್ಧ ಆರೋಪ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಬ್ ಗೋಸ್ವಾಮಿಗೆ ಪೊಲೀಸರು 2 ನೊಟೀಸ್ ಜಾರಿ ಮಾಡಿದ್ದರು.

LEAVE A REPLY

Please enter your comment!
Please enter your name here