ಪುತ್ತೂರು: ಮುಸ್ಲಿಂ ಬಟ್ಟೆ ವ್ಯಾಪಾರಿಗಳ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಪುತ್ತೂರು: ಅನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿ ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಜ್ಯದ ಮುಖ್ಯಮಂತ್ರಿಗಳು ನೀಡಿರುವ ಅಸಂಬದ್ಧ ಹೇಳಿಕೆಯೇ ದಕ್ಷಿಣ ಕನ್ನಡ ಜಿಲ್ಲೆಯ ಸ್ವಾಸ್ಥ್ಯ ಕದಡಲು ಕಾರಣ ಎಂದು SKSSF ರಾಜ್ಯ ಪ್ರಧಾನ ಕಾರ್ಯದರ್ಶಿ ಅನೀಸ್ ಕೌಸರಿ ಆರೋಪಿಸಿದ್ದಾರೆ.

ಇತ್ತೀಚೆಗೆ ಕಾಣಿಯೂರಿನಲ್ಲಿ ನಡೆದ ಬಟ್ಟೆ ವ್ಯಾಪಾರಿಗಳ ಮೇಲಿನ ಹಲ್ಲೆಯನ್ನು ಖಂಡಿಸಿ ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಪುತ್ತೂರು ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ ತಿಂಗಳುಗಳ ಹಿಂದೆ ಕರಾವಳಿಯಲ್ಲಿ ನಡೆದ ಸರಣಿ ಕೊಲೆಗಳ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ತಳೆದ ತಾರತಮ್ಯ ಧೋರಣೆ, ಕ್ರಿಯೆಗೆ ಪ್ರತಿಕ್ರಿಯೆ ಎಂಬ ಹೇಳಿಕೆ, ಪ್ರಸಕ್ತ ನಡೆಯುತ್ತಿರುವ ದುಷ್ಕೃತ್ಯಗಳ ಬಗ್ಗೆ ಮೌನ ವಹಿಸುತ್ತಿರುವ ನಡೆ ಇವುಗಳೆಲ್ಲವೂ ಇಲ್ಲಿನ ಕೋಮುಕ್ರಿಮಿಗಳಿಗೆ ಅನುಕೂಲ ವಾತಾವರಣವನ್ನುಂಟು ಮಾಡಿದೆ ಎಂದು ಹೇಳಿದರು.

ವಾಗ್ಮಿ ರಫೀಯುದ್ದಿನ್ ಕುದ್ರೋಳಿ ಮಾತನಾಡಿ, ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದ ತಾರತಮ್ಯ ನೀತಿಯನ್ನು ಖಂಡಿಸಿದರು.

LEAVE A REPLY

Please enter your comment!
Please enter your name here