ಪೇಜಾವರ ಶ್ರೀ ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲು

ದೇಹದ ಅನಾರೋಗ್ಯ ಸಮಸ್ಯೆಯಿಂದ ಉಡುಪಿ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಇಂದು ಬೆಳಗ್ಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಮುಂಜಾನೆ ಸುಮಾರು ಐದು ಗಂಟೆಗೆ ಮಣಿಪಾಲದ ಕೆಎಂಸಿ ಗೆ ದಾಖಲಾಗಿರುವ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ವೆಂಟಿಲೇಟರ್ ಮೂಲಕ‌ ಕೃತಕ ಉಸಿರಾಟ ವ್ಯವಸ್ಥೆ ಕಲ್ಪಿಸಲಾಗಿದೆ. ನಿನ್ನೆ ಸಂಜೆವರೆಗೂ ಲವಲವಿಕೆಯಿಂದ ಇದ್ದರು ಹಾಗೂ ನಿನ್ನೆ ನಡೆದ ನಾಲ್ಕು ಸಭಾ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. 

ಈಗಾಗಲೇ ಆಸ್ಪತ್ರೆಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ , ಕಲ್ಲಡ್ಕ ಪ್ರಭಾಕರ್‌ ಭಟ್‌, ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ,ಎಡನೀರು ಸ್ವಾಮೀಜಿ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳು ಶೀಘ್ರ ಗುಣಮುಖರಾಗುವರೆಂಬ ವಿಶ್ವಾಸ ಇದೆ ಎಂದು ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಪೇಜಾವರ ಶ್ರೀಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಶೀಘ್ರ ಗುಣಮುಖರಾಗಲು ಹಾರೈಸಿದ್ದಾರೆ.ಯೋಗಗುರು ಬಾಬಾ ರಾಮದೇವ್ ಶ್ರೀಗಳು ಗುಣಮುಖರಾಗುವಂತೆ ಹರಿದ್ವಾರದ ಪತಂಜಲಿ ಯೋಗ ಪೀಠದಲ್ಲಿ ವಿಶೇಷ ಭಜನೆ ಬಾಬಾ ರಾಮ್ ದೇವ್ ನೇತೃತ್ವದಲ್ಲಿ ಪೂಜೆ ನಡೆಸಲಾಗಿದೆ.

LEAVE A REPLY

Please enter your comment!
Please enter your name here