ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಯುವಕನೊಬ್ಬ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ನಡೆದಿದೆ.
ಸಿದ್ದಪ್ಪ ಕೊಂಡಾ( 20) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಹತ್ತರಿಂದ ಹದಿನೈದು ಜನರ ತಂಡ ನಿನ್ನೆ ತಡರಾತ್ರಿ ಲಾಡ್ಲಾಪುರ ಗ್ರಾಮದ ಹಾಜಿ ಸರ್ವರ್ ದರ್ಗಾದಲ್ಲಿ ಇಸ್ಪೀಟ್ ಆಡುತ್ತಿದ್ದರು. ಈ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ಓಡಿದ ಸಿದ್ದಪ್ಪ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನೆ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.