ಪೊಲೀಸ್‌ ನೇಮಕಾತಿ – ಅಭ್ಯರ್ಥಿಗಳಿಗೆ ವಯೋಮಿತಿ ಹೆಚ್ಚಳ – ರಾಜ್ಯ ಸರ್ಕಾರದಿಂದ ನಿರ್ಧಾರ

ಪೊಲೀಸರ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ ವಯೋಮಿತಿ ವಿಸ್ತರಿಸಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಇವತ್ತು ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಜನರಲ್ ಕೆಟಗರಿಯ ಅಭ್ಯರ್ಥಿಗಳಿಗೆ ಈಗಿರುವ ವಯೋಮಿತಿಯನ್ನು 28 ರಿಂದ 30 ವರ್ಷಕ್ಕೆ ಹೆಚ್ಚಿಸಲಾಗಿದೆ. ಎಸ್ಸಿ, ಎಸ್ಸಿ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿಯನ್ನು 30 ರಿಂದ 32ಕ್ಕೆ ಹೆಚ್ಚಿಸಲಾಗಿದೆ.

ಇನ್ನು ಸದ್ಯ ಘೋಷಣೆ ಆಗಿರುವ ಪಿಎಸ್‌ಐಗಳ ನೇಮಕಾತಿ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here