ಪೋಕ್ಸೋ ಅಡಿ ಮುರುಘಾ ಶರಣರ ವಿರುದ್ಧ 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಮುರುಘಾ ಶ್ರೀ

ಚಿತ್ರದುರ್ಗ: ಮುರುಘಾ ಶ್ರೀಗಳ ವಿರುದ್ಧದ ಲೈಂಗಿಕ ದೌರ್ಜನ್ಯದ 2ನೇ ಪೋಕ್ಸೋ ಪ್ರಕರಣದ ತನಿಖೆ ನಡೆಸಿರುವ ಡಿವೈಎಸ್ಪಿ ಅನಿಲ್ ನೇತೃತ್ವದ ತಂಡವು ನಗರದ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ.

ಪೋಕ್ಸೋ, ಅಟ್ರಾಸಿಟಿ ಮತ್ತು ಧಾರ್ಮಿಕ ಕೇಂದ್ರ ದುರುಪಯೋಗ ಕಾಯ್ದೆ ಅಡಿಯಲ್ಲೂ ಮುರುಘಾ ಶ್ರೀ ವಿರುದ್ಧದ ಪ್ರಕರಣ ದಾಖಲಾಗಿದ್ದು, 342 ಪುಟಗಳ 2 ಸೆಟ್ ನಂತೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ಮುರುಘಾ ಶ್ರೀ, ಲೇಡಿ ವಾರ್ಡನ್ (ರಶ್ಮಿ), ಕಾರ್ಯದರ್ಶಿ ಪರಮಶಿವಯ್ಯ ಹಾಗೂ ಮಠದ ಉತ್ತರಾಧಿಕಾರಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಆದರೆ ವಕೀಲ ಗಂಗಾಧರಯ್ಯ ಭಾಗಿ ಆಗಿರುವ ಮಾಹಿತಿ ಇಲ್ಲ, ಈ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಮುರುಘಾಶ್ರೀ ಲೇಡಿ ವಾರ್ಡನ್ ಮೂಲಕ ಮಕ್ಕಳನ್ನು ಕರೆಸಿ, ನಿರಂತರ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು. ಮತ್ತು ಬರುವ ಔಷಧಿ ಬೆರೆಸಿದ ಸೇಬು ನೀಡಿ ಮಕ್ಕಳನ್ನು ಅತ್ಯಾಚಾರಕ್ಕೆ ಬಳಸಿಕೊಂಡಿದ್ದು, ಕಚೇರಿ, ಬೆಡ್ ರೂಂ, ಬಾತ್ ರೂಂ ಗೆ ಕರೆದೊಯ್ದು ಬಲಾತ್ಕಾರ ಮಾಡಿದ್ದಾರೆ. ವಿರೋಧಿಸಿದವರಿಗೆ ಜೀವ ಬೆದರಿಕೆ ಹಾಕುತ್ತಿದ್ದು, ಇದೇ ರೀತಿ ಹತ್ತಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ.

ಅಲ್ಲದೇ ಕೆಲ ವರ್ಷದ ಹಿಂದೆ ಓರ್ವ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದ್ದು, ಈ ಬಗ್ಗೆ ಸಂತ್ರಸ್ತ ಬಾಲಕಿಯರಿಂದ ಹೇಳಿಕೆ ಪಡೆದು, ಆಂಧ್ರಕ್ಕೆ ತೆರಳಿದ್ದ ಪೊಲೀಸ್ ತಂಡ ಹಲವು ಮಾಹಿತಿಗಳನ್ನು ಕಲೆ ಹಾಕಿದೆ. ಮಠದ ಹಾಸ್ಟೆಲ್ ನಲ್ಲಿದ್ದ ಮತ್ತಷ್ಟು ಮಕ್ಕಳ ವಿಚಾರಣೆ ನಡೆಸಲಾಗುತ್ತಿದ್ದು, ಶ್ರೀಗಳ ವಿರುದ್ಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here