ಪೋಷಕರೇ, ನಿಮ್ಮ ಮಕ್ಕಳ ಶಾಲಾ ಶುಲ್ಕ ಕಟ್ಟಿ ಖಾಸಗಿ ಶಾಲೆಗಳನ್ನು ಉಳಿಸಿ-ರಾಜ್ಯ ಸರ್ಕಾರದಿಂದ ಸುತ್ತೋಲೆ

ರಾಜ್ಯದಲ್ಲಿರುವ ಎಲ್ಲಾ ಖಾಸಗಿ ಶಾಲೆಗಳಿಗೆ ಪೋಷಕರಿಂದ ಶುಲ್ಕ ವಸೂಲಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಖಾಸಗಿ ಶಾಲಾ ಆಡಳಿತ ಮಂಡಳಿಗಳ ಮನವಿಗೆ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಒಪ್ಪಿಕೊಂಡಿದ್ದು, ಈ ಬೆನ್ನಲ್ಲೇ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಯಾವ ಪೋಷಕರು ತಮ್ಮ ಮಕ್ಕಳ ಬೋಧನಾ ಶುಲ್ಕ ಕಟ್ಟಲು ಆರ್ಥಿಕವಾಗಿ ಸಮರ್ಥರಿದ್ದಾರೋ, ಯಾವ ಪೋಷಕರು ತಮ್ಮ ಮಕ್ಕಳ ಶಾಲೆಯ ಉಳಿವಿನ ಬಗ್ಗೆ ಆಲೋಚಿಸಿ ಸ್ವಯಂಪ್ರೇರಿತವಾಗಿ ಶುಲ್ಕ ಪಾವತಿಗೆ ಮುಂದಾಗುತ್ತಾರೋ ಅಂತಹ ಪೋಷಕರಿಂದ ಅವರು ಇಚ್ಚಿಸುವ ಕಂತುಗಳಲ್ಲಿ ಶುಲ್ಕ ಪಾವತಿಗೆ ಅವಕಾಶ ನೀಡಬಹುದು.

ಶುಲ್ಕ ಕಟ್ಟಲು ಸಾಧ್ಯವಾಗದ ಪೋಷಕರ ಮೇಲೆ ಒತ್ತಡ ಹಾಕುವಂತಿಲ್ಲ. ಒತ್ತಡ ಹಾಕಿದಲ್ಲಿ ಅಂತಹ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಶಿಕ್ಷಣ ಇಲಾಖೆ ನೀಡಿದೆ.

ಈ ರೀತಿ ಪೋಷಕರಿಂದ ಪಡೆದ ಹಣವನ್ನು ಮೊದಲ ಆದ್ಯತೆಯಾಗಿ ಶಿಕ್ಷಕರ ಸಂಬಳಕ್ಕೆ ನೀಡಲು ಬಳಸಿಕೊಳ್ಳಬೇಕು ಎಂದು ರಾಜ್ಯದ ಎಲ್ಲಾ ಖಾಸಾಗಿ ಶಾಲೆಗಳಿಗೆ ಸರ್ಕಾರ ಸೂಚನೆ ನೀಡಿದೆ.

ಸರ್ಕಾರದ ಈ ನಿರ್ಧಾರವನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಸ್ವಾಗತಿಸಿವೆ.

LEAVE A REPLY

Please enter your comment!
Please enter your name here