ಪ್ರಧಾನಿ ಭೇಟಿ ಹಿನ್ನಲೆ: ಪ್ರತಿಭಟನೆಗೆ ಮುಂದಾಗಿದ್ದ ರೈತರ ಬಂಧನ

ತುಮಕೂರಿನಲ್ಲಿ ಇವತ್ತು ಕೇಂದ್ರದ ಕೃಷಿ ಇಲಾಖೆ ರಾಜ್ಯ ಸರಕಾರದ ಸಹಕಾರದೊಂದಿಗೆ ಆಯೋಜಿಸಿರುವ ಕೃಷಿ ಕರ್ಮಣ್ಯೆ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ೪ ನೇ ಸುತ್ತಿನ ಕೃಷಿ ಸನ್ಮಾನ ಕಂತು ಬಿಡುಗಡೆ ಸಮಾರಂಭಕ್ಕೆ ಆಗಮಿಸುವ ಮುನ್ನ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದ ರೈತರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಪೋಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶನಕ್ಕೆ ಮುಂದಾಗಿದ್ದ ಎಲ್ಲಾ ರೈತ ತಾಲೂಕು ಮುಖಂಡರು ಮತ್ತು ಹಸಿರು ಸೇನೆ ಕಾರ್ಯಕರ್ತರನ್ನು ಪೋಲೀಸರು ಬಂಧಿಸಿ ಕೊರಟಗೆರೆಯ ಪೋಲೀಸ್‌ ತರಬೇತಿ ಕೇಂದ್ರಕ್ಕೆ ಕರೆದೊಯ್ದಿದ್ದಾರೆ

LEAVE A REPLY

Please enter your comment!
Please enter your name here