ಪ್ರಧಾನಿ ಮೋದಿ ಸರ್ಕಾರದ ವಿಶೇಷ ಪ್ಯಾಕೇಜ್‌ ಶೇಕಡಾ 1ಕ್ಕಿಂತಲೂ ಕಡಿಮೆ – ರಾಹುಲ್‌ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಘೋಷಣೆ ಮಾಡಿರುವ 20 ಲಕ್ಷ ಕೋಟಿ ರೂಪಾಯಿ ಮೊತ್ತದ ವಿಶೇಷ ಪ್ಯಾಕೇಜ್‌ ಬಗ್ಗೆಯೂ ರಾಹುಲ್‌ ಗಾಂಧಿ ಪ್ರಶ್ನೆ ಮಾಡಿದ್ದಾರೆ.

ಕೇಂದ್ರ ಸರ್ಕಾರ ಘೋಷಿಸಿರುವ ವಿಶೇಷ ಪ್ಯಾಕೇಜ್‌ ಜಿಡಿಪಿಯ ಶೇಕಡಾ 10ರಷ್ಟಿಲ್ಲ, ಶೇಕಡಾ 1ಕ್ಕಿಂತಲೂ ಕಡಿಮೆ ಇದೆ ಎಂದು ರಾಹುಲ್‌ ಹೇಳಿದ್ದಾರೆ.

ಹಣಕಾಸು ಸಚಿವರು ಹಲವಾರು ಬಾರಿ ನಡೆಸಿದ ಪತ್ರಿಕಾಗೋಷ್ಟಿಯ ಸಂದರ್ಭದಲ್ಲಿ ಸರ್ಕಾರದ ಪ್ಯಾಕೇಜ್‌ಗಳ‌ ಬಗ್ಗೆ ನಮಗೆ ಬಹಳಷ್ಟು ನಿರೀಕ್ಷೆಗಳಿದ್ದವು, ಪ್ರಧಾನಿಯವರು ಜಿಡಿಪಿ ಶೇಕಡಾ 10ರಷ್ಟು ವಿಶೇಷ ಪ್ಯಾಕೇಜ್‌ ಇರಲಿದೆ ಎಂದು ಹೇಳಿದ್ದರು ಆದರೆ ಭಾರತದ ಜಿಡಿಪಿ ಶೇಕಡಾ 1ಕ್ಕಿಂತಲೂ ಕಡಿಮೆ ಇದೆ ಎಂದು ರಾಹುಲ್‌ ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ಸರ್ಕಾರವಿರುವ ರಾಜ್ಯಗಳಲ್ಲಿ ನಾವು ಜನರಿಗೆ ನೇರವಾಗಿ ಮತ್ತು ಹಲವಾರು ಯೋಜನೆಗಳ ಮೂಲಕ ಆರ್ಥಿಕ ಸಹಾಯವನ್ನು ನೀಡಿದ್ದೇವೆ. ಆದರೆ ಈ ರೀತಿಯ ಕಾರ್ಯಗಳಿಗೆ ಕೇಂದ್ರ ಸರ್ಕಾರದ ಬೆಂಬಲ ಸಿಗುತ್ತಿಲ್ಲ ಎಂದು ರಾಗಾ ಆರೋಪಿಸಿದ್ದಾರೆ.

ಇದು ಯಾವುದೇ ರಾಜಕೀಯವಲ್ಲ ನನ್ನ ಕಳಕಳಿಯ ಏನೆಂದರೆ ದೇಶದಲ್ಲಿ ಸೋಂಕು ಹೆಚ್ಚುತ್ತಿದೆ. ಹೀಗಾಗಿ ಈ ಪ್ರಶ್ನೆಗಳನ್ನು ನಿಮ್ಮ ಮುಂದಿಡುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ರಾಹುಲ್‌ ಗಾಂಧಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here