ಫೆಬ್ರವರಿ 13ರಂದು ಕರ್ನಾಟಕ ಬಂದ್‌..? ಏನಿರುತ್ತೆ ಏನಿರಲ್ಲ..?

ಫೆಬ್ರವರಿ 13ರಂದು ಕರ್ನಾಟಕ ಬಂದ್‌ ಆಗಲಿದೆ. ಕರ್ನಾಟಕದಲ್ಲಿ ಉದ್ಯೋಗದಲ್ಲಿ ಕನ್ನಡಿಗರಿಗೆ ಆಗುತ್ತಿರುವ ತಾರತಮ್ಯ ಖಂಡಿಸಿ ಮತ್ತು ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಸಂಘಟನೆಗಳ ಒಕ್ಕೂಟ ಬಂದ್‌ಗೆ ಕರೆ ನೀಡಿವೆ.

ಬಂದ್‌ಗೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರ ಸಂಘಗಳು ಬೆಂಬಲ ಸೂಚಿಸಿವೆ. ಈ ಹಿನ್ನೆಲೆಯಲ್ಲಿ ಬಂದ್‌ನಂದು ಸರ್ಕಾರಿ ಬಸ್‌ಗಳ ಓಡಾಟ ಇರುವುದು ಬಹುತೇಕ ಅನುಮಾನ.

ಬಂದ್‌ಗೆ ಓಲಾ, ಉಬರ್‌, ಆಟೋ ಚಾಲಕರು ಮತ್ತು ಮಾಲೀಕರ ಸಂಘಟನೆಗಳು ಬೆಂಬಲ ಸೂಚಿಸಿವೆ. ಲಾರಿ ಮಾಲೀಕರ ಸಂಘಗಳು ಕೂಡಾ ಬೆನ್ನಿಗೆ ನಿಂತಿವೆ. ೪೦೦ ಸಂಘಟನೆಗಳು ಜೊತೆಯಾಗಿ ಬಂದ್‌ ಘೋಷಿಸಿವೆ.

ಸರೋಜಿನಿ ಮಹಿಷಿ ವರದಿ ಜಾರಿಗೆ ೯೬ ದಿನಗಳಿಂದ ಹೋರಾಟ ಮಾಡುತ್ತಿದ್ದೇವೆ. ಆದರೆ ಸರ್ಕಾರ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ನೂರನೇ ದಿನದಂದು ಬಂದ್‌ ಆಚರಿಸಲು ನಿರ್ಧರಿಸಿದ್ದೇವೆ ಎಂದು ಕನ್ನಡ ಪರ ಸಂಘಟನೆಗಳ ನಾಗೇಶ್‌ ಹೇಳಿದ್ದಾರೆ.

LEAVE A REPLY

Please enter your comment!
Please enter your name here