ಬೆಂಗಳೂರಿನಲ್ಲಿ ಇನ್ನು ಮಾಸ್ಕ್‌ ಹಾಕದೇ ರೋಡಿಗೆ ಇಳಿದರೆ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ..!

ಬೆಂಗಳೂರಿಗರೇ ಹುಷಾರ್…!‌

ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವಾಗ ಮತ್ತು ಕೆಲಸದ ಸ್ಥಳದಲ್ಲಿ ಮುಖಕ್ಕೆ ಮಾಸ್ಕ್‌ ಧರಿಸುವುದು ಮತ್ತು ಅವುಗಳನ್ನು ಸೂಕ್ತ ವಿಲೇವಾರಿ ಮಾಡುವುದನ್ನು ಬಿಬಿಎಂಪಿ ಕಡ್ಡಾಯಗೊಳಿಸಿದೆ.

ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್‌ ಧರಿಸದಿದ್ದರೆ ಮಾತ್ರವಲ್ಲ, ಉಗುಳಿದರೆ ಮತ್ತು ಮೂತ್ರ ವಿಸರ್ಜನೆಗೂ ದುಬಾರಿ ದಂಡ ತೆರಬೇಕಾದೀತು.

ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ನಗರದಲ್ಲಿ ಈ ಆದೇಶ ಹೊರಡಿಸಲಾಗಿದೆ. ಈ ಆದೇಶವನ್ನು ಮೊದಲ ಬಾರಿ ಉಲ್ಲಂಘಿಸಿದ್ದಲ್ಲಿ  1000 ರೂ. ದಂಡ ಹಾಗೂ ಎರಡನೇ ಬಾರಿ ಉಲ್ಲಂಘಿಸಿದರೆ 2000 ರೂ ದಂಡ ವಿಧಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ನಿಷೇಧಿತ ಕೃತ್ಯ ಎಸಗುವುದನ್ನು ಭಾರತೀಯ ದಂಡಸಂಹಿತೆಯ (ಐಪಿಸಿ) ಸೆಕ್ಷನ್ 188, 269 ಮತ್ತು 270 ರ ಅನ್ವಯ ಅಪರಾಧವೆಂದು ಪರಿಗಣಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here