ಬೆಳ್ತಂಗಡಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಬೆಳ್ತಂಗಡಿ, ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ, ಪಟ್ಟಣ ಪಂಚಾಯತ್, ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ ಸಹಯೋಗದಲ್ಲಿ ಬೆಳ್ತಂಗಡಿ ಸಂತೆಕಟ್ಟೆ ಬಳಿಯ ಅಯ್ಯಪ್ಪ ಮಂದಿರದಿಂದ ಬೆಳ್ತಂಗಡಿ ಮುಖ್ಯ ಬಸ್ಸು ತಂಗುದಾಣದವರೆಗೆ ಕೋವಿಡ್ ನಿಯಂತ್ರಣದ ಬಗ್ಗೆ ಜಾಥಾ ಹಾಗೂ ಮಾಹಿತಿ ಕಾರ್ಯಕ್ರಮ ಮಾ.23 ರಂದು ಜರುಗಿತು.
ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು, ಬೆಳ್ತಂಗಡಿ ಆರೋಗ್ಯ ಇಲಾಖೆಯ ಕ್ಷೇತ್ರ ಆರೋಗ್ಯ ಶಿಕ್ಷಕಿ ಶ್ರೀಮತಿ ಅಮ್ಮಿ, ನ.ಪಂ ಅಧ್ಯಕ್ಷೆ ಶ್ರೀಮತಿ ರಜನಿ ಕುಡ್ವ, ಮುಖ್ಯಾಧಿಕಾರಿ ಸುಧಾಕರ್, ಜನಪ್ರತಿನಿಧಿಗಳು, ಎಲ್ಲಾ ಇಲಾಖೆಯ ಸರಕಾರಿ ಅಧಿಕಾರಿಗಳು, ಸಿಬ್ಬಂದಿಗಳು, ಸಂಘ ಸಂಸ್ಥೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.