ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ದಕ್ಷ ಆಡಳಿತ ನೀಡಿದ್ದ ಡಾ. ಕೆ.ವಿ. ರಾಜೇಂದ್ರ (ಐಎಎಸ್) ಅವರನ್ನು ವರ್ಗಾವಣೆ ಮಾಡಲಾಗಿದ್ದು, ಮೈಸೂರು ಜಿಲ್ಲಾಧಿಕಾರಿಯಾಗಿ ನಿಯುಕ್ತಿಗೊಳಿಸಲಾಗಿದೆ.
ರಾಜೇಂದ್ರ ಅವರು ಡಾ.ಬಗ್ದಾದಿ ಗೌತಮ್ ಅವರಿಂದ ತೆರವಾದ ಸ್ಥಾನದಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.
ಆದರೆ ದಕ್ಷಿಣ ಕನ್ನಡ ಜಿಲ್ಲೆಗೆ ಯಾವುದೇ ಹೊಸ ಜಿಲ್ಲಾಧಿಕಾರಿಯ ನೇಮಕಾತಿ ಆಗದೇ ಇರುವುದರಿಂದ ಸದ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ಡಾ. ಕುಮಾರ (ಐಎಎಸ್ 2015 ಬ್ಯಾಚ್) ಅವರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹುದ್ದೆಯ ನಿರ್ವಹಣೆಯ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.