ಮಂಗಳೂರು: ಪ್ರತಿಭಾ ಕುಳಾಯಿ ಬಗ್ಗೆ ಅಶ್ಲೀಲ ಪೋಸ್ಟ್: ಆರೋಪಿಗೆ ಜಾಮೀನು ನಿರಾಕರಣೆ

ಮಂಗಳೂರು: ಕೆಪಿಸಿಸಿ ಸಂಯೋಜಕಿ ಹಾಗೂ ಇತ್ತೀಚೆಗೆ ಟೋಲ್ ವಿರೋಧಿ ಹೋರಾಟ ಸಮಿತಿಯಲ್ಲಿ ಸಕ್ರಿಯವಾಗಿದ್ದ ಪ್ರತಿಭಾ ಕುಳಾಯಿ ಕುರಿತು ಅಶ್ಲೀಲವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಕೀರ್ತನ್ ಶೆಟ್ಟಿ ಅಡ್ಯಾರ್ ಎಂಬಾತನಿಗೆ ಮಂಗಳೂರು ನ್ಯಾಯಾಲಯ ಜಾಮೀನು ನಿರಾಕರಿಸಿದೆ.

ಟೋಲ್ ವಿರೋಧಿ ಹೋರಾಟ ಸಮಿತಿಯಲ್ಲಿ ಸಕ್ರಿಯವಾಗಿದ್ದ ಪ್ರತಿಭಾ ಕುಳಾಯಿ ಕುರಿತು ಕಹಳೆ ನ್ಯೂಸ್ ಸಂಪಾದಕ ಶ್ಯಾಮ ಸುದರ್ಶನ ಭಟ್ ಹೊಸಮೂಲೆ ಹಾಗೂ ಕೆ.ಆರ್.ಶೆಟ್ಟಿ ಎಂಬವರು ಅಶ್ಲೀಲವಾಗಿ ಪೋಸ್ಟ್ ಮಾಡಿದ್ದರು. ಇದಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಗುರುವಾರ ಎರಡನೇ ಆರೋಪಿ ಕೀರ್ತನ್ ಶೆಟ್ಟಿ  ಎಂಬಾತ ನ್ಯಾಯಾಲಯಕ್ಕೆ ಶರಣಾಗಿದ್ದು, ಪೊಲೀಸರು ಕಸ್ಟಡಿಗೆ ಪಡೆದಿದ್ದರು.

ಈ ಮಧ್ಯೆ ಆರೋಪಿ ಶೆಟ್ಟಿ ಜಾಮೀನಿಗಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ. ಆದರೆ ನ್ಯಾಯಾಧೀಶರು ಆತನಿಗೆ ಜಾಮೀನು ನಿರಾಕರಿಸಿದ್ದಾರೆ.